ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಪ್ರಯಾಗರಾಜ್ (Prayagraj) : ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Kumbhamela) ಮಾಘ ಮಾಸದ ಮೌನಿ ಅಮಾವಾಸ್ಯೆಯ (Amavasye) ಪುಣ್ಯ ಸ್ನಾನದ ವೇಳೆ ಭಾರೀ ನೂಕುನುಗ್ಗಲು ಉಂಟಾಗಿದೆ.
ಭಾರತದ ಮೂರು ಪವಿತ್ರ ನದಿಗಳು ಒಟ್ಟಿಗೆ ಸೇರುವ ಸಂಗಮ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ ಹಲವರು ಮೃತಪಟ್ಟಿದ್ದಾರೆ. ತ್ರಿವೇಣಿ ಸಂಗಮದಿಂದ (Triveni Sangama) ಸುಮಾರು ಒಂದು ಕಿಲೋಮೀಟರ್ ವರೆಗೂ ಜನಸಂದಣಿ ಉಂಟಾಗಿದೆ. ಘಟನೆ ಬಗ್ಗೆ ವಿಷಾಧ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
‘ಪ್ರಯಾಗ್‌ರಾಜ್ (Prayagaraj) ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿರುವುದು ಅತ್ಯಂತ ದುಃಖಕರ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡಿರುವವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮೋದಿ(Modi) ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪರಿಸ್ಥಿತಿಯನ್ನು ನಿಯಂತ್ರಿಸುವುದರ ಜತೆಗೆ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಎಲ್ಲ ರೀತಿಯಲ್ಲೂ ಸಹಾಯ ಮಾಡುತ್ತಿದೆ. ನಾನು ಮುಖ್ಯಮಂತ್ರಿ ಯೋಗಿ ಜೀ ಅವರೊಂದಿಗೆ ಮಾತನಾಡಿದ್ದೇನೆ. ಜತೆಗೆ, ರಾಜ್ಯ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ’ ಎಂದು ಮೋದಿ ತಿಳಿಸಿದ್ದಾರೆ.
ಮೌನಿ ಅಮಾವಾಸ್ಯೆ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಪ್ರವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಪ್ರಯಾಗರಾಜ್‌ನಲ್ಲಿ ಜಮಾಯಿಸಿದ್ದಾರೆ. ಜನವರಿ 13 ರಂದು ಆರಂಭವಾಗಿರುವ ಮಹಾಕುಂಭಮೇಳವು ಫೆಬ್ರುವರಿ 26ರವರೆಗೆ ನಡೆಯಲಿದೆ. ಈ ಬಾರಿ ಕುಂಭಮೇಳಕ್ಕೆ 45 ಕೋಟಿ ಜನ ಆಗಮಿಸುವ ನಿರೀಕ್ಷೆ ಇದೆ ಎಂದು ಸರ್ಕಾರ ಹೇಳಿದೆ. ಮಹಾಕುಂಭಮೇಳದ ಎರಡನೇ ‘ಪವಿತ್ರ ಸ್ನಾನ’ ಇದಾಗಿದ್ದು, ಇಂದು ಒಂದೇ ದಿನ 10 ಕೋಟಿ ಭಕ್ತರು ಸಂಗಮದಲ್ಲಿ ಮಿಂದೇಳುವ ನಿರೀಕ್ಷೆಯಿದೆ.
ಇದನ್ನು ಓದಿ : ಪ್ರತಿಷ್ಟಿತ ಬ್ಯಾಂಕ್ ಬುಡಕ್ಕೆ ಕೈ ಹಾಕಿದ ಸೈಬರ್ ಕಳ್ಳರು. ಅಕೌಂಟ್ ಹ್ಯಾಕ್.
ಅಂಕೋಲಾದ ನಿರ್ಜನ ಪ್ರದೇಶದಲ್ಲಿ ಶಂಕಾಸ್ಪದ ಕಾರು. ಕೋಟಿ ರೂ ಪತ್ತೆ.
ನಿಜಶರಣ ಅಂಬಿಗರ ಚೌಡಯ್ಯ ವೃತ್ತಕ್ಕೆ ಎಂಎಲ್ಸಿ ಗಣಪತಿ ಉಳ್ವೆಕರ್ ಮನವಿ
ನೃತ್ಯಕ್ಕೂ ಸೈ, ಓದಿಗೂ ಜೈ. ಸಾಧನೆಯ ಶಿಖರದ ಶಿರಾಲಿಯ ಧನಲಕ್ಷ್ಮೀ ಮೊಗೇರಗೆ ವಿಧುಷಿ ಪಟ್ಟ.