ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಬೆಂಗಳೂರು(Bangalore) :  ಕೆಲ ದಿನಗಳಿಂದ ರಾಜ್ಯದಲ್ಲಿ  ಬಾರೀ ಸದ್ದು ಮಾಡುತ್ತಿರುವ ಧರ್ಮಸ್ಥಳದ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಶೇಷ ತನಿಖಾ ದಳ ರಚನೆ ಮಾಡಿದ್ದು, ಈ ತಂಡದಲ್ಲಿ 20ಕ್ಕೂ ಅಧಿಕ ಹೆಚ್ಚುವರಿ ಅಧಿಕಾರಿಗಳ ನೇಮಕ ಮಾಡಿದ್ದಾಗಿ ಗೊತ್ತಾಗಿದೆ.

ಹಿರಿಯ ಪೊಲೀಸ್ ಅಧಿಕಾರಿ ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದ್ದು ಎಸ್‌ಐಟಿ ಸದಸ್ಯರಾಗಿ ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾ‌ರ್ ಸೇರಿದಂತೆ ಕೆಲವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಹೆಚ್ಚುವರಿಯಾಗಿ ಇಪ್ಪತ್ತು ಜನ ಖಡಕ್ ಅಧಿಕಾರಿಗಳನ್ನು ಸರ್ಕಾರ ನೇಮಿಸಿದೆ.

ಮಂಗಳೂರು ಡಿಸಿಆರ್‌ಇ ಎಸ್‌ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್‌ಪಿ ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್, ಸಿಎಸ್‌ಪಿ ಇನ್ಸ್‌ಪೆಕ್ಟರ್ ಇಸಿ ಸಂಪತ್, ಸಿಎಸ್‌ಪಿ ಪೊಲೀಸ್ ಇನ್ಸ್ಪೆಕ್ಟರ್ ಕೆ.ಕುಸುಮಧರ್, ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್ಪೆಕ್ಟರ್ ಪಿ.ಡಿ ಸವಿತ್ರು ತೇಜ್, ಸಿಎಸ್‌ಪಿ ಸಬ್‌ಇನ್ಸ್ಪೆಕ್ಟರ್ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ಇನ್ಸ್ಪೆಕ್ಟರ್ ವೈಲೆಟ್ ಫೆಮಿನಾ, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್ ಶಿವ ಶಂಕರ್, ಉತ್ತರ ಕನ್ನಡ,

ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್ ಆರ್.ಸುಹಾಸ್, ಉತ್ತರ ಕನ್ನಡ ಮುಂಡಗೋಡು ಸಬ್‌ಇನ್ಸ್ಪೆಕ್ಟರ್ ವಿನೋದ್ ಎಸ್. ಕಾಳಪ್ಪನವರ್, ಮಂಗಳೂರು ಮೆಸ್ಕಾಂ ಸಬ್‌ಇನ್ಸ್ಪೆಕ್ಟರ್ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಹರೀಶ್‌ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್‌ಕಾನ್‌ಸ್ಟೆಬಲ್ ಪ್ರಕಾಶ್, ಉಡುಪಿ ಕುಂದಾಪುರ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್‌ಎಂಎಸ್ ಹೆಡ್‌ಕಾನ್‌ಸ್ಟೆಬಲ್ ದೇವರಾಜ್ ಅವರನ್ನು ಸರ್ಕಾರ ನಿಯೋಜಿಸಿದೆ.

ಇದನ್ನು ಓದಿ : ಭಟ್ಕಳದ ಡಾ. ಭಾಗೀರಥಿ ನಾಯ್ಕ ಗೆಬೆಸ್ಟ್  ಅಸೋಸಿಯೇಟ್ ಪ್ರೊಫೆಸರ್ ಪ್ರಶಸ್ತಿ