ಭಟ್ಕಳ (Bhatkal) : ಬಸ್ ದರ ಏರಿಕೆ(Bus Price Hike) ಹಾಗೂ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಆತ್ಮಹತ್ಯೆ ಖಂಡಿಸಿ ಭಟ್ಕಳದಲ್ಲಿ ಬಿಜೆಪಿ (BJP) ಮಂಡಲ ವತಿಯಿಂದ ಸಹಾಯಕ ಅಯುಕ್ತರಿಗೆ ಮನವಿ (Memorandum) ಸಲ್ಲಿಸಲಾಯಿತು.

ಶನಿವಾರ ಭಟ್ಕಳ ಸಹಾಯಕ ಆಯುಕ್ತರ ಕಚೇರಿ ಎದುರು ಜಮಾಯಿಸಿದ ಬಿಜೆಪಿ (BJP) ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಮಾತನಾಡಿ, ಕಾಂಗ್ರೆಸ್(Congres) ತೆರಿಗೆ ಹಣದಲ್ಲಿ ಸರ್ಕಾರ ನಡೆಸುವ ಪರಿಸ್ಥಿತಿಯಲ್ಲಿಲ್ಲ. ಈ ಕಾರಣಕ್ಕೆ ದರ ಏರಿಸುವುದನ್ನು ಬಿಟ್ಟರೆ ಅವರಿಗೆ ಬೇರೆ ಪರ್ಯಾಯ ದಾರಿ ಇಲ್ಲ. ಸರ್ಕಾರ ಜನಸಾಮಾನ್ಯರಿಗೆ ಯಾವ ರೀತಿ ಗಾಯದ ಮೇಲೆ ಬರೆ ಎಳೆಯುತ್ತಿದೆ  ಎಂದರು.

ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಈಶ್ವರ ನಾಯ್ಕ ಮಾತನಾಡಿ, ಪಂಚ ಗ್ಯಾರಂಟಿ ಮೇಲೆ ಈ ಕಾಂಗ್ರೆಸ್ ಸರ್ಕಾರ ಆರಿಸಿ ಬಂದಿದೆ. ಈ ಗ್ಯಾರಂಟಿ ನಂಬಿ ಜನರು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದರು. ಆದರೆ ಈಗ ಯಾವೊಂದು  ಅಭಿವೃದ್ಧಿ ಕೆಲಸ  ಆಗುತ್ತಿಲ್ಲ ಎಂದು ಆಪಾದಿಸಿದರು.

ಸಹಾಯಕ ಆಯುಕ್ತರ ಅನುಪಸ್ಥಿತಿಯಲ್ಲಿ ತಹಶೀಲ್ದಾ‌ರ್ ನಾಗೇಂದ್ರ ಕೋಳಶೆಟ್ಟಿ ಮನವಿ (Memorandum) ಸ್ವೀಕರಿಸಿದರು. ಈ ಸಂದರ್ಭದಲ್ಲಿ ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮಿನಾರಾಯಣ ನಾಯ್ಕ,  ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಮೂಡಭಟ್ಕಳ, ಯುವ ಮೋರ್ಚಾ ಅಧ್ಯಕ್ಷ ಸುನೀಲ ಕಾಮತ ಸೇರಿದಂತೆ ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಹಾಜರಿದ್ದರು.

ಇದನ್ನು ಓದಿ : ಕೇಕ್ ತಿಂದು 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ.

ಗಂಗೊಳ್ಳಿ ಪಂಚಾಯತ್ ನಲ್ಲಿ ಮೌಲ್ವಿಯಿಂದ ದುವಾ, ಅರ್ಚಕರಿಂದ ಗಣಹೋಮ.

  ಕಾನಸ್ಟೇಬಲ್ ಒಬ್ಬರನ್ನ ಹನಿಟ್ರ್ಯಾಪ್ ಖೆಡ್ಡಾಕ್ಕೆ ದೂಡಿದ ಐನಾತಿ ಲೇಡಿ.

ಗೀತಾ ಪ್ರಕರಣ. ಕೊಲೆ ಆರೋಪಿಯ ಬಾಡೂಟ ಉಂಡ ದೋಸ್ತರು.