ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಮತ್ತು ಹೊನ್ನಾವರ ತಾಲೂಕಿನ ಕಾಸರಕೋಡು ಗ್ರಾಮದಲ್ಲಿ ನಿಷೇದಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಭಾವಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳು ಮತ್ತು ಪುರಸಭೆ ಅಂಕೋಲಾ ವ್ಯಾಪ್ತಿಗೊಳಪಟ್ಟ ಕೇಣಿ ಗ್ರಾಮದಲ್ಲಿ Geotechnical investigation work ಕಾಮಗಾರಿ ಸಂಬoಧ ಸದ್ರಿ ಪ್ರದೇಶದಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ ಹೊರಡಿಸಲಾದ ನಿಷೇದಾಜ್ಞೆಯನ್ನು ಫೆ. 25 ರ ಸಂಜೆ 6 ಗಂಟೆಯಿoದ ಫೆ. 28 ರ ಸಂಜೆ 6 ಗಂಟೆಯವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದು, ಆದೇಶದಲ್ಲಿ ವಿಧಿಸಲಾದ ನಿಬಂಧನೆಗಳು ಊರ್ಜಿತದಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66 ಹತ್ತಿರದಲ್ಲಿರುವ ಹಿರೇಮಠ ಸ್ಮಶಾನದಿಂದ ಕಾಸರಕೋಡ ಗ್ರಾಮದಲ್ಲಿ ಸಮುದ್ರಗುಂಟ ಇರುವ ರಸ್ತೆಯನ್ನು ಅಭಿವೃದ್ಧಿಪಡಿಸಿ ಬಂದರು ಅಭಿವೃದ್ಧಿ ಯೋಜನಾ ಸ್ಥಳದವರೆಗೆ ಹೋಗುವ ರಸ್ತೆ ಕಾಮಗಾರಿಯ ಸರ್ವೆ ಸಂಬoಧ ಸುತ್ತಲಿನ ಪ್ರದೇಶದಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ ಹೊರಡಿಸಲಾದ ನಿಷೇದಾಜ್ಞೆಯನ್ನು ಫೆ.25 ರ ರಾತ್ರಿ 9 ಗಂಟೆಯಿoದ ಫೆ.26 ರ ರಾತ್ರಿ 10 ಗಂಟೆಯವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ  ಆದೇಶಿಸಿದ್ದಾರೆ.

ಇದನ್ನು ಓದಿ : ಪೊಲೀಸ್ ಸರ್ಪಗಾವಲಿನ ನಡುವೆ ಸರ್ವೆ. ನಿಷೇದಾಜ್ಞೆ ನಡುವೆ ನಾಗರಿಕರ ಬೃಹತ್ ಪ್ರತಿಭಟನೆ.

ಯೋಜನೆ ವಿರೋಧಿಸಿ ಸಮುದ್ರಕ್ಕೆ ಜಿಗಿದ ಮಹಿಳೆಯರು. ಮೂವರು ಅಸ್ವಸ್ಥ.