ಕಾರವಾರ : ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾಗಿದ್ದು ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ಘೋಷಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಸಮಗ್ರ ತನಿಖೆ ನಡೆದು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ ಆಗ್ರಹಿಸಿದ್ದಾರೆ.
ಸಚಿವ ಬಿ.ನಾಗೇಂದ್ರ ರಾಜೀನಾಮೆ ಘೋಷಿಸಿದ್ದು, ಕೇವಲ ರಾಜೀನಾಮೆ ನೀಡಿದರೆ ಸಾಲದು. ಅವರನ್ನೂ ತನಿಖೆಗೊಳಪಡಿಸಬೇಕು. ಹಗರಣದ ಸಮಗ್ರ ತನಿಖೆ ನಡೆದು ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದಾರೆ ಅವರನ್ನೆಲ್ಲ ತನಿಖೆಗೊಳಪಡಿಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕಾಗಿದೆ. .ಇದೊಂದು ಗಂಭೀರ ಪ್ರಕರಣವಾಗಿದೆ. ಹಣ ವರ್ಗಾವಣೆಯ ಹಿಂದೆ ಯಾರೆಲ್ಲ ಇದ್ದಾರೆ. ಹಣವನ್ನು ಯಾರು ಬಳಸಿದ್ದಾರೆ. ಯಾವ ಉದ್ದೇಶಕ್ಕೆ ಬಳಸಲಾಗಿದೆ ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆ ಹೊರಕ್ಕೆ ಬರಬೇಕಾಗಿದೆ.
ಈಗಾಗಲೆ  ರಾಜ್ಯಪಾಲರ ಬಳಿ ಪಾದಯಾತ್ರೆಯಲ್ಲಿ
ಬಿಜೆಪಿ ನಾಯಕರು ತೆರಳಿದ್ದು  ಕೇವಲ ಸಚಿವ ನಾಗೇಂದ್ರ ಮಾತ್ರವಲ್ಲ  ಇನ್ನೂ ಉನ್ನತ ವ್ಯಕ್ತಿಗಳೂ ಈ ಅವ್ಯವಹಾರದಲ್ಲಿ ಶಾಮೀಲಾಗಿರುವ ಸಾಧ್ಯತೆ ಇದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿಬೀಳಬೇಕಾಗಿದೆ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರದ ಮೇಲೆ ಯಾವುದೇ ದಾಖಲೆ ಇಲ್ಲದೆ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ಕೂಪದಲ್ಲಿ ಸಿಲುಕಿರುವುದು ವಿಪರ್ಯಾಸವಾಗಿದ್ದು, ಕಾಂಗ್ರೆಸ್ಸಿಗರಿಗೆ ಇದು ತಿರುಗುಬಾಣವಾಗಿದೆ ಎಂದು ರೂಪಾಲಿ ಎಸ್.ನಾಯ್ಕ  ತಿಳಿಸಿದ್ದಾರೆ.
	
						
							
			
			
			
			
