ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಬೆಂಗಳೂರು(Bangalore) : ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ನೀಡಿದ್ದ ರಾಜ್ಯ ಸಚಿವ ದರ್ಜೆ ಸ್ಥಾನಮಾನ ಮತ್ತು ಎಲ್ಲ ಸವಲತ್ತುಗಳನ್ನು ರಾಜ್ಯ ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಪಸ್ ಪಡೆದುಕೊಂಡಿದೆ.

ಮಹೇಶ್ ಜೋಶಿ ಅವರ ಕಾರ್ಯವೈಖರಿಯನ್ನು ಆಕ್ಷೇಪಿಸಿ ಕೆಲ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲಿಖಿತ ದೂರು ನೀಡಿದ್ದರು. ಮಹೇಶ್ ಜೋಶಿಗೆ ನೀಡಲಾಗಿರುವ ಸಚಿವ ದರ್ಜೆ ಸ್ಥಾನಮಾನ ಹಿಂಪಡೆಯಬೇಕು. ಅಲ್ಲದೆ, ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದಿಂದ ಇಳಿಸಬೇಕು ಎಂದು ಮನವಿ ಮಾಡಿ ಆಗ್ರಹಿಸಿದ್ದರು.

ಈ ನಡುವೆ  ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆದೇಶ ಹೊರಡಿಸಿದ್ದಾರೆ.  05-01-2023ರಂದು ಮಹೇಶ್ ಜೋಶಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಅವರು ಆದೇಶದಲ್ಲಿ  ತಿಳಿಸಿದ್ದಾರೆ.

ಇದನ್ನು ಓದಿ : ಇಂದಿನಿಂದ ಆಳ ಸಮುದ್ರ ಮೀನುಗಾರಿಕೆ ನಿಷೇಧ. ಸರ್ಕಾರದ ಆದೇಶ.