ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಭಾರತೀಯ ಹವಾಮಾನ ಇಲಾಖೆ(IMD), ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳವರೆಗೆ ರೆಡ್  ಅಲರ್ಟ್(Red Alert) ಘೋಷಿಸಲಾಗಿದೆ.

ಜೂನ್ 12 ರಿಂದ 14 ವರೆಗೆ  ಜಿಲ್ಲೆಯಲ್ಲಿ ಗುಡುಗು ಸಿಡಿಲಿನೊಂದಿಗೆ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ(DC Lakshmipriya) ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡoತೆ ಸೂಚನೆಗಳನ್ನು ನೀಡಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ() ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24*7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿದೆ. ಸಾರ್ವಜನಿಕರು ಯಾವುದೇ ಅನಧಿಕೃತ ವದಂತಿಗಳಿಗೆ ಕಿವಿಗೊಡಬಾರದು.

ಮೇಲೆ ತಿಳಿಸಿದ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು.

ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.

ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು.

ಸಾರ್ವಜನಿಕರು, ಮಕ್ಕಳು,ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು.
ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು.

ಮೇಲಿನ ಅಂಶಗಳನ್ನು ಗುಡುಗು ಸಿಡಿಲು/ ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಚು ತಪ್ಪದೇ ಕಡ್ಡಾಯವಾಗಿ ಪಾಲಿಸುವುದು. ಸಾರ್ವಜನಿಕರಿಗೆ ಆಗತ್ಯವಿದ್ದಲ್ಲಿ ಮುಂಜಾಗ್ರತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು.

ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಆದಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ಪಾನವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು.

ಅಗತ್ಯವಿದ್ದಲ್ಲಿ ಈಗಾಗಲೇ ಸಂಬoಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳುವುದು.

ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು.

ಸಾರ್ವಜನಿಕರಿಗೆ ಈ ಮೇಲಿನ ಅಂಶಗಳoತೆ ಶಿಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌoಡ್ ಅಥವಾ ಮನೆಯಗೋಡೆ ಕಂಡುಬoದಲ್ಲಿ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ : 24 *7 ಕಂಟ್ರೋಲ್ ರೂಂ-08382-229857, ವಾಟ್ಸಪ್ ನಂ: 9483511015 ದೂರವಾಣಿಗೆ ಮಾಹಿತಿ ನೀಡಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಗೆ ಅಥವಾ ಆಯಾ ತಾಲೂಕಾ ತಹಶೀಲ್ದಾರರ ಕಛೇರಿಗೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.

ಇದನ್ನು ಓದಿ : ಯುವಕನೊಂದಿಗೆ ಓಡಿ ಹೋದ  ಎರಡು ಮಕ್ಕಳ ತಾಯಿ.

ಚಾಕು ನುಂಗಿದ ನಾಗರ.  ಅಪಾಯದಿಂದ ಪಾರು ಮಾಡಿದ ಸ್ನೇಕ್ ಪವನ್.

ಆಕೆ ಅಂಥಿಂಥವಳಲ್ಲ. ಹದಿನಾಲ್ಕನೆ ಮದುವೆಗೆ ಸಿದ್ದಳಾದ ಚಾಲಾಕಿ ಪೊಲೀಸರ ಬಲೆಗೆ.

/