ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಧರ್ಮಸ್ಥಳ(Dharmasthala) : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಹಾಗೂ ಆ್ಯಂಟಿ ನಕ್ಸಲ್ ಫೋರ್ಸ್ (ANF) ಮುಂದುವರಿಸಿದೆ.
ನೇತ್ರಾವತಿ ಸ್ನಾನ ಘಟ್ಟ ಪ್ರದೇಶದ ಅನತಿ ದೂರದಲ್ಲಿ ಮುಸುಕುಧಾರಿ ಅನಾಮಿಕ ವ್ಯಕ್ತಿ ಇವರೆಗೆ 14 ಶವ ಹೂತ ಸ್ಥಳಗಳನ್ನು ತನಿಖಾ ತಂಡಕ್ಕೆ ತೋರಿಸಿದ್ದಾನೆ. ನಾಳೆ ಸಹ ಮತ್ತೆ ಸ್ಥಳ ಪರಿಶೀಲನಾ ಕಾರ್ಯ ಮುಂದುವರಿಯುವ ಸಾಧ್ಯತೆ ಇದೆ. ಸ್ಥಳ ಗುರುತು ಕಾರ್ಯ ನಡೆದ ಬಳಿಕ, ಎಸ್‌ಐಟಿ ಪ್ರತ್ಯೇಕವಾಗಿ ಉತ್ಖನನ ಕಾರ್ಯಾಚರಣೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಶಂಕಿತ ಶವ ಹೂತ ಜಾಗಗಳ ಸುತ್ತಮುತ್ತ ಎಎನ್ಎಪ್ ಕಮಾಂಡೋ(ANF) ಪಡೆ ನಿಯೋಜನೆಯಾಗಿದೆ. ಸಾಕ್ಷ್ಯ ನಾಶವಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
ನೇತ್ರಾವತಿ ನದಿಯ ಪಕ್ಕದ ಗುಡ್ಡ ಪ್ರದೇಶದಲ್ಲೂ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಾರ್ವಜನಿಕ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಸುಕುಧಾರಿ ಇನ್ನಷ್ಟು ಸ್ಥಳಗಳನ್ನು ತೋರಿಸಬಹುದು ಎಂಬ ನಿರೀಕ್ಷೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.
ಭದ್ರತಾ ಪಡೆಗಳು ಹಗಲು-ರಾತ್ರಿ ಕರ್ತವ್ಯ ನಿರ್ವಹಿಸುತ್ತಿವೆ. ಶಂಕಿತ ಹತ್ಯೆಗಳ ಹಿನ್ನೆಲೆಯಲ್ಲಿ, ದೇಶ ಹಾಗೂ ರಾಜ್ಯ ಮಟ್ಟದಲ್ಲಿ ಬಾರಿ ಚರ್ಚೆಯಾಗುತ್ತಿದ್ದು, ತನಿಖೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಇದನ್ನು ಓದಿ : ರೈಲು ಡಿಕ್ಕಿಯಾಗಿ ವ್ಯಕ್ತಿ ಗಂಭೀರ ಗಾಯ.