ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) :  ಉತ್ತರಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿಯುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹೀಗಾಗಿ ಅಗಸ್ಟ್  20 ರಂದು ಕೆಲ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಕೆ. ಅವರು  ಉತ್ತರಕನ್ನಡ (Uttarakannada) ಜಿಲ್ಲೆಯ ಶಿರಸಿ(Sirsi), ಸಿದ್ದಾಪುರ(Siddapura), ಯಲ್ಲಾಪುರ(Yallapur), ಜೋಯಿಡಾ(Joida) ಮತ್ತು ದಾಂಡೇಲಿ(Dandeli), ಮತ್ತು ಮುಂಡಗೋಡು(Mundgodu) ತಾಲ್ಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ಮತ್ತು ಪದವಿ ಪೂರ್ವ ಕಾಲೇಜುಗಳಿಗೆ   ರಜೆ ಘೋಷಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಕ್ಷಣ ಕಾರ್ಯರೂಪಕ್ಕೆ ತರುವಂತೆ ತಿಳಿಸಲಾಗಿದೆ.  ಈ ರಜಾ ದಿನವನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ  ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ : ಪತ್ನಿ ಸಾವಿನಿಂದ ಮನನೊಂದು ಪತಿ ನೇಣಿಗೆ ಶರಣು.

ದನ ಮೇಯಿಸುತ್ತಿದ್ದ ರೈತನ ಮೇಲೆ ಕರಡಿಗಳ ದಾಳಿ.