ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal) :  20 ಲಕ್ಷ ರೂಪಾಯಿ ಹಣಕ್ಕಾಗಿ  ತರಕಾರಿ ವ್ಯಾಪಾರಿಯನ್ನು ಹೆದರಿಸಿ  ಸುಲಿಗೆ ಮಾಡಲು ಯತ್ನಿಸಿದ ಮೂವರು ಯುವಕರನ್ನು ಭಟ್ಕಳ ಶಹರ ಪೊಲೀಸರು(Bhatkal Town Police) ಬಂಧಿಸಿ  ಜೈಲಿಗೆ ಕಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಟ್ಟಣದ ಭಟ್ಟಗಾಂವ್ ನ ಕಿದ್ವಾಯಿ ರಸ್ತೆಯ ನಿವಾಸಿ ವಿದ್ಯಾಧಿ ಅನ್ವರಭಾಷ (57) ಅಂಗಡಿಯಲ್ಲಿ ಇದ್ದ ಸಂದರ್ಭದಲ್ಲಿ ಆಗಸ್ಟ್ 16ರ ರಾತ್ರಿ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ  “ನಿನ್ನ ಮಗಳ ಖಾಸಗಿ ಫೋಟೋ, ವೀಡಿಯೋ ನನ್ನ ಬಳಿ ಇದೆ. ತಕ್ಷಣ 20 ಲಕ್ಷ ಕೊಡಬೇಕು, ಇಲ್ಲವಾದರೆ ಎಲ್ಲರಿಗೂ ಕಳುಹಿಸಿ ನಿನ್ನ ಮಾನ ಹಾಳು ಮಾಡುತ್ತೇನೆ” ಎಂದು ಬೆದರಿಕೆ(Threat) ಹಾಕಿದ್ದ.

ಬಳಿಕ  18 ಮತ್ತು 19ರಂದು ವ್ಯಾಪಾರಿಯ ಪತ್ನಿಯ ಮೊಬೈಲ್‌ಗೆ ಕರೆ ಮಾಡಿ, “15 ಲಕ್ಷ ಆದರೂ ನೀಡಬೇಕು” ಎಂದು ಒತ್ತಾಯಿಸಿದ್ದ. ಬೆದರಿಕೆಗಳಿಂದ ಕಂಗಾಲಾದ ವ್ಯಾಪಾರಿ ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಡಿವೈಎಸ್ಪಿ  ಮಹೇಶ್ ಎಂ.ಕೆ.ಮಾರ್ಗದರ್ಶನದಲ್ಲಿ ಭಟ್ಕಳ ಶಹರ ಇನ್ಸ್‌ಪೆಕ್ಟರ್ ದಿವಾಕರ ಪಿ.ಎಮ್. ಹಾಗೂ ಪಿ.ಎಸ್.ಐ ನವೀನ್ ಎಸ್. ನಾಯ್ಕ ನೇತೃತ್ವದ ಪ್ರತ್ಯೇಕ ತಂಡ ರಚಿಸಿ ಆರೋಪಿಗಳಿಗೆ ಹುಡುಕಾಟ ನಡೆಸಲಾಗಿತ್ತು. 

ತನಿಖೆಯಲ್ಲಿ ಭಟ್ಕಳ ಅಬ್ದುಹುರೇರಾ ಕಾಲೊನಿ‌ಯ ಮೊಹಮ್ಮದ ಫಾರಿಸ್  ಅಬ್ದುಲ್ ಮುತಲ್ಲಬ್ ಕೋಡಿ, ಮೂಸಾನಗರದ ಮೊಹಮ್ಮದ ಅರ್ಷದ್  ಮೊಹಮ್ಮದ್ ಜುಬೇರ್ ಬ್ಯಾರಿ ಹಾಗೂ ಕುಂದಾಪುರ ಹಾಲಾಡಿಯ ಇಂಜಿನಿಯರಿಂಗ್ ವಿದ್ಯಾರ್ಥಿ ಅಮನ್ ಮಸೂದ ಖಾನ್  ಎಂಬುವವರನ್ನ  ಪತ್ತೆ ಹಚ್ಚಿ ಬಂಧಿಸಲಾಗಿದೆ. ನಂತರ  ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಠಾಣೆಯ   ಸಿಬ್ಬಂದಿಗಳಾದ ದಿನೇಶ ನಾಯಕ, ವಿನಾಯಕ ಪಾಟೀಲ್, ನಾಗರಾಜ ಮೊಗೇರ, ಮಹಾಂತೇಶ ಹಿರೇಮಠ, ಕಾಶಿನಾಥ ಕೊಟಗುಣಸಿ,  ಲೊಕೇಶ ಕತ್ತಿ, ಮಹೇಶ ಅಮಗೋತ ರಾಘವೇಂದ್ರ ಗೌಡ, ಜಗದೀಶ ನಾಯ್ಕ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿಗಳದ ಬಬನ್ ಮತ್ತು ಉದಯ ಗುನಗಾ ಅವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ಮು ಓದಿ : ಭಟ್ಕಳದಲ್ಲಿ ಭೀಕರ ಅಪಘಾತ. ರಾ. ಹೆದ್ದಾರಿ 66ರಲ್ಲಿ ಘಟನೆ.