ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಶಿರಸಿ(Sirsi) : ತಾಲೂಕಿನ ಇಸಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮ*ತ್ಯೆಗೆ ಶರಣಾದ ಘಟನೆ ನಡೆದಿದೆ.
17 ವರ್ಷದ ಸ್ನೇಹಾ ಎಂಬ ವಿದ್ಯಾರ್ಥಿನಿ ಕೆರೆಗೆ ಹಾರಿ ಸಾವನ್ನಪ್ಪಿದ್ದಾಳೆ. ಈಕೆ ಪ್ರಥಮ ವರ್ಷದ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಮನೆಯಲ್ಲಿ ಪಾಲಕರು ಹೆಚ್ಚಾಗಿ ಮೊಬೈಲ್ ನೋಡಬೇಡ, ಮಾರ್ಕೆಟ್ ಗೆ ಹೆಚ್ಚು ಸುತ್ತಾಡಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆಯ(Sirsi Rural Station) ಪಿಎಸ್‌ಐ ಸಂತೋಷಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ.
ಇದನ್ನು ಓದಿ : ಭಟ್ಕಳ ಪೊಲೀಸರ ಭರ್ಜರಿ ಕಾರ್ಯಾಚರಣೆ. ಭರ್ಜರಿ. ನಿಷೇಧಿತ ವಸ್ತುಗಳ ಜಪ್ತಿ. ಆರೋಪಿ ಬಂಧನ.