ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಸಿದ್ದಾಪುರ(Siddapur) : 2025-26 ಸಾಲಿನ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಇಲ್ಲಿನ ಹಳ್ಳಿಬೈಲ್ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕ ಗೋಪಾಲ ಕೆ. ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ.

ಹಳ್ಳಿಬೈಲ್ ಸರ್ಕಾರಿ ಪ್ರೌಢಶಾಲೆ ಕನ್ನಡ ಶಿಕ್ಷಕರಾಗಿದ್ದು, ಶಿಕ್ಷಕ ವೃತ್ತಿಯ ಜೊತೆಗೆ ಈ ಹಿಂದೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು. ಇವರು ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದು ಐದು ಮಕ್ಕಳ ಏಕಾಂತ ನಾಟಕವನ್ನು ಬರೆದು ನಿರ್ದೇಶಿಸಿದ್ದಾರೆ. ಈ ಪೈಕಿ ರಾಜ್ಯಮಟ್ಟದಲ್ಲಿ ಪ್ರದರ್ಶನಗೊಂಡ ‘ವೀರ ಮಯೂರ’ ನಾಟಕ ತೃತೀಯ ಸ್ಥಾನವನ್ನು ಪಡೆದಿದೆ. ಜೊತೆಗೆ ಮೂರು ವಿಜ್ಞಾನ ನಾಟಕವನ್ನು ಬರೆದಿದ್ದು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಪ್ರದರ್ಶನಗೊಂಡಿವೆ. ಕಾರವಾರದಲ್ಲಿ ಈ ಹಿಂದೆ ಮತ ಮಾರಾಟಕ್ಕಿಲ್ಲ ಎಂಬ ನಾಟಕ ಪ್ರದರ್ಶಿಸಿ ಮತದಾನದ ಜಾಗೃತಿಯನ್ನು ಮಾಡಿದ್ದಾರೆ.

ಗೋಪಾಲ ನಾಯ್ಕ ಅವರು ಇದುವರೆಗೆ ಅನೇಕ ಬಡ, ಏಕಪಾಲಕ, ಅನಾಥ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಧನಸಹಾಯ ಹಾಗೂ ಪಠ್ಯಪುಸ್ತಕಗಳು, ಲೇಖನ ಸಾಮಗ್ರಿಗಳ ಸಹಾಯ ಮಾಡಿದ್ದು ನೆರೆ ಸಂತ್ರಸ್ಥರಿಗೆ, ಮುಗದೂರು ಅನಾಥಾಶ್ರಮಕ್ಕೆ ಹೀಗೆ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇವರಿಗೆ ಜಿಲ್ಲಾ ಹಾಗೂ ತಾಲೂಕು ಕಸಾಪ ಪದಾಧಿಕಾರಿಗಳು, ಸಾಹಿತಿಗಳು, ಶಿಕ್ಷಕರು ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿ ಇನ್ನೂ ಹೆಚ್ಚಿನ ಗೌರವಗಳು ದೊರೆಯುವಂತಾಗಲೆಂದು ಶುಭ ಹಾರೈಸಿದ್ದಾರೆ.

ಇದನ್ನು ಓದಿ : ಜನಮನದ ಶಿಕ್ಷಕ ಪಿ ಆರ್ ನಾಯ್ಕ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪುರಸ್ಕಾರ.

ಬಹುಮುಖ ಪ್ರತಿಭೆಯ ಶಿಕ್ಷಕ ಶ್ರೀಧರ ಶೇಟ್ ಶಿರಾಲಿಗೆ ಒಲಿದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ