ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಭೋಪಾಲ್(Bhopal) : ಭಟ್ಕಳ(Bhatkal) ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಾಗಿ ಕರ್ತವ್ಯ ನಿರ್ವಹಿಸಿದ್ದ ವೈದ್ಯರೊಬ್ಬರು(Doctor) ಆತ್ಮ**ಗೆ ಶರಣಾದ ಘಟನೆ ನಡೆದಿದೆ.
39 ವರ್ಷದ  ಡಾ. ಸಹನ್ ಎಸ್. ಕುಮಾರ ಎಂಬುವವರೆ ಸಾವು ಕಂಡವರು ಎಂದು ತಿಳಿದುಬಂದಿದೆ.  ಭೋಪಾಲ್ನ(Bhopal) ಟಿ.ಟಿ. ನಗರದಲ್ಲಿರುವ ಹೋಟೆಲೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ(South Canar) ಜಿಲ್ಲೆಯ ಮೂಡುಬಿದಿರೆ(Mudabidre) ತಾಲ್ಲೂಕಿನ ತೆಂಕಮಿಜಾರು ಗ್ರಾಮದ ಮೂಲದ ಡಾ.ಸಹನ್ ಕುಮಾರ 2021ರಿಂದ 2024ರ ಜೂನ್ ವರೆಗೆ  ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ(Bhatkal Government Hospital) ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಬಾಲಾಘಾಟ್ನ(Balaghat) ಖಾಸಗಿ ಆಸ್ಪತ್ರೆಗೆ ಸೇರಿ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದರು.
ಮಧ್ಯಪ್ರದೇಶ ವೈದ್ಯಕೀಯ ಮಂಡಳಿಯ ಕೌನ್ಸೆಲಿಂಗ್ ಸಭೆಯಲ್ಲಿ ಪಾಲ್ಗೊಳ್ಳಲು ಅವರು ಭೋಪಾಲ್ಗೆ ತೆರಳಿದ್ದರು. ಆದರೆ ಸಭೆಗೆ ಹಾಜರಾಗುವ ಮುಂಚೆ ಹೋಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಆದರೆ ಕೊಠಡಿಯಿಂದ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಕೊಠಡಿ ತೆರೆದುಕೊಳ್ಳದ ಹಿನ್ನೆಲೆಯಲ್ಲಿ ಹೋಟೆಲ್ ಸಿಬ್ಬಂದಿ ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ನಾನಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಮೊಬೈಲ್ ಫೋನ್, ಇಯರ್ಫೋನ್ ಹಾಗೂ ಬ್ಯಾಗ್ ಸೇರಿದಂತೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಯಾರೊಂದಿಗಾದರೂ ಪೋನ್ ಕಾಲ್ ಮಾಡಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಡಾ ಸಹನಕುಮಾರ ಇತ್ತೀಚೆಗೆ ಪತ್ನಿಯಿಂದ ವಿಚ್ಛೇದನ ಪಡೆದಿದ್ದ ವೈದ್ಯರು ಮಾನಸಿಕ ಒತ್ತಡಕ್ಕೆ ಒಳಗಾಗಿ ಜೀವ ತ್ಯಜಿಸಿರುವ ಸಾಧ್ಯತೆ ವ್ಯಕ್ತವಾಗಿದೆ ಎಂದು ಭೋಪಾಲ್ ಟಿಟಿ ನಗರ ಠಾಣಾ ಪ್ರಭಾರಿ ಗೌರವ್ ದೋಹರೆ ಸಂಶಯಿಸಿದ್ದಾರೆ.
ಇದನ್ನು ಓದಿ : ಕೈಗಾ ಬಳಿ ಹಾಡಹಗಲೇ ರಾಜಗಾಂಭೀರ್ಯದಿಂದ ನಡೆದ ಹುಲಿ
ಅವೈಜ್ಞಾನಿಕ ಡಂಪಿಂಗ್ ಯಾರ್ಡ್ ನಿಂದ ಮಕ್ಕಳಿಗೆ ಉಸಿರುಗಟ್ಟುವ ವಾತಾವರಣ.
	
						
							
			
			
			
			
