ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಅಂಕೋಲಾ(Ankola) : ಸರ್ಕಾರಿ ಬಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 63(NH 63) ಅಂಕೋಲಾದಲ್ಲಿ(Ankola) ಸಂಭವಿಸಿದೆ.
ಅಡ್ಲೂರು ಬಳಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಮತ್ತು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೇಣಿ ಮೂಲದ ಭಾಸ್ಕರ ಗಾಂವಕರ ಎಂಬುವವರು ಮೃತಪಟ್ಟಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ.
ಅಂಕೋಲಾ(Ankola) ತಾಲೂಕಿನ ಮಕ್ಕಿಗದ್ದೆಯಿಂದ ಬಸ್ ಪುನಃ ಅಂಕೋಲಾ ಕಡೆ ತೆರಳುತ್ತಿತ್ತು. ಈ ವೇಳೆ ಅತಿ ವೇಗದಿಂದ ಅಂಕೋಲಾದಿಂದ ಯಲ್ಲಾಪುರ(Ankola to Yallapur) ಕಡೆ ತೆರಳುತ್ತಿದ್ದ ಟ್ಯಾಂಕರ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಅಪಘಾತ ನಡೆದಿದೆ.
ಬಸ್ ಚಾಲಕನ ಕಾಲಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯರ ನೆರವಿನಿಂದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಗಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು(Ankola Police) ತೆರಳಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ : ಭಟ್ಕಳದಲ್ಲಿ ಜಾನುವಾರು ಕಟಾವು ಮಾಡಿದ ದುರುಳರು. ಇಬ್ಬರಿಗೆ ಹೆಡೆಮುರಿ ಕಟ್ಟಿದ ಪೊಲೀಸರು.
ಕಡಲತೀರದಲ್ಲಿ ತಟರಕ್ಷಕ ಪಡೆಗೆ ಜಾಗ ನೀಡಬೇಡಿ. ಮೀನುಗಾರರಿಂದ ಜಿಲ್ಲಾಧಿಕಾರಿಗೆ ಮನವಿ.
ಜಾತಿಗಣತಿಯಲ್ಲಿ ಗೊಂದಲ. ಬಾಂದಿ ಎಂದು ನಮೂದಿಸಲು ಕೃಷ್ಣಾನಂದ ಬಾಂದೇಕರ ಮನವಿ.