ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಮಂಗಳೂರು(Mangalore) : ಧರ್ಮಸ್ಥಳ ಪ್ರಕರಣ(Dharmasthala Case) ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಮಂಗಳೂರಿನಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಮಂಗಳೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarody) ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನಲೆಯಲ್ಲಿ ಮಹೇಶ್ ತಿಮರೋಡಿ ಅವರನ್ನು ಗಡಿಪಾರು ಮಾಡುವಂತೆ ರಾಜ್ಯಾದ್ಯಂತ ವ್ಯಾಪಕ ಒತ್ತಾಯ ಕೇಳಿ ಬಂದಿದ್ದವು. ಇದೀಗ ಅವರನ್ನ ಮಂಗಳೂರಿನಿಂದ ರಾಯಚೂರಿನ ಮಾನ್ವಿ(Rayachuru Manvi) ತಾಲೂಕಿಗೆ ಒಂದು ವರ್ಷಗಳ ಕಾಲ ಗಡಿಪಾರು ಮಾಡಲಾಗಿದೆ.
ಪುತ್ತೂರು ಸಹಾಯಕ ಆಯುಕ್ತರು ಸಪ್ಟೆಂಬರ್ 20ರಂದೇ
ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಗಡಿಪಾರು ನೋಟಿಸ್ ಅನ್ನು ಪೊಲೀಸರು ಖುದ್ದು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನೀಡಿದ ಬಳಿಕ ಗಡಿಪಾರು ಪ್ರಕ್ರಿಯೆ ನಡೆಯುತ್ತದೆ.
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ ಅವರು ಹಲವು ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದಾರೆ. ಸೌಜನ್ಯ ಪರ ಹೋರಾಟದಲ್ಲೂ ಸಹ ಇವರು ಮುಂಚೂಣಿಯಲ್ಲಿದ್ದರು. ಅಲ್ಲದೇ ಧರ್ಮಸ್ಥಳ ಪ್ರಕರಣದಲ್ಲೂ ಸಹ ಕಾಣಿಸಿಕೊಂಡಿದ್ದು, ಈ ಸಂಬಂಧ ಇವರ ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್(B L Santosh) ವಿರುದ್ಧವೂ ಸಹ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದರು. ಸದ್ಯ ಇವರ ವಿರುದ್ಧ ಸುಮಾರು 32 ಪ್ರಕರಣ ಇದ್ದು, ವಿಚಾರಣೆ ಹಂತದಲ್ಲಿವೆ. ಈ ನಡುವೆ ಗಡಿಪಾರು ಮಾಡಲಾಗಿದೆ.
ಇದನ್ನು ಓದಿ : ಶಿರಸಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ. ಯುವತಿ ದುರ್ಮರಣ
ಕಾರವಾರದಲ್ಲಿ ಹೂ ಹಣ್ಣು ವ್ಯಾಪಾರಿಗಳ ಜಗಳ. ಮಹಿಳೆಯರ ಮಾರಾಮಾರಿ
ಮುರ್ಡೇಶ್ವರ ಪ್ರವಾಸಕ್ಕೆ ಬಂದು ಸಮುದ್ರದ ಅಲೆಗೆ ಸಿಲುಕಿದ ಕುಟುಂಬ. ಬಾಲಕ ನೀರುಪಾಲು.