ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ದಾವಣಗೆರೆ(Davanagere) : ನಾನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್(Bhairati Suresh) ಆಪ್ತ ಸಹಾಯಕ ಎಂದು ಹೇಳಿ ದಾವಣಗೆರೆ ಜಿಲ್ಲಾಧಿಕಾರಿ (Davanagere DC) ಗಂಗಾಧರ ಸ್ವಾಮಿ ಅವರಿಗೆ ಕರೆ ಮಾಡಿ ವಂಚಿಸಿದ ಖತರ್ನಾಕ್ ಯುವಕನೋರ್ವನನ್ನು ಗಾಂಧಿನಗರ ಪೊಲೀಸರು(Gandhinagara Police) ಬಂಧಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯ(Uttarakannada District) ಕಾರವಾರ ವಿದ್ಯಾರ್ಥಿ ಮೂರ್ತಿ ಅಲಿಯಾಸ್ ಅಭಿಷೇಕ್ ದೊಡ್ಡಮನಿ(20) ಬಂಧಿತ ಆರೋಪಿ.
ದಾವಣಗೆರೆ ಜಿಲ್ಲಾಧಿಕಾರಿ ಅವರಿಗೆ ಕರೆ ಮಾಡಿ ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಂಡ ಬಗ್ಗೆ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರು ನೀಡಿದ ದೂರಿನ ಮೇರೆಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.86/25 ರಲ್ಲಿ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಹಾಗೂ ನಗರ ಉಪಾಧೀಕ್ಷಕ ಶರಣಬಸವೇಶ್ವರ ಬಿ. ಮತ್ತು ವೃತ್ತ ನಿರೀಕ್ಷಕ ಬಾಲಚಂದ್ರ ನಾಯ್ಕ ಅವರ ಮಾರ್ಗದರ್ಶನದಲ್ಲಿ ವಂಚಿಸಿದ ಆರೋಪಿಯನ್ನು ಗಾಂಧಿನಗರ ಪೊಲೀಸ್ ಠಾಣೆಯ(Gandhinagar Police Station) ಠಾಣಾಧಿಕಾರಿ ರವಿ ನಾಯ್ಕ ಹಾಗೂ ಸಿಬ್ಬಂದಿಯವರು ತಂಡವು ಆರೋಪಿತನ ಪತ್ತೆ ಮಾಡಿದೆ.
ಸರ್ಕಾರಿ ಅಧಿಕಾರಿ ಹಾಗೂ ಆಪ್ತ ಸಹಾಯಕರ ಸೋಗಿನಲ್ಲಿ ನಟಿಸಿ ಜಿಲ್ಲಾಧಿಕಾರಿಗಳಿಗೆ ವಂಚಿಸಿದ್ದ ಆರೋಪಿತನಾದ ಮೂರ್ತಿ ಅಲಿಯಾಸ್ ಅಭಿಷೇಕ್ ದೊಡ್ಡಮನಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದನ್ನು ಓದಿ : ಸರಸ್ವತಿ ಸಮ್ಮಾನ್, ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ.
ಕಾನೂರು ಪ್ರವಾಸಕ್ಕೆ ಬಂದ ವಿದ್ಯಾರ್ಥಿ ಕಾಲು ಜಾರಿ ಬಿದ್ದು ಸಾವು.