ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಅಕ್ಟೊಬರ್ 2 ರ ವರೆಗೆ ಹವಮಾನ ವೈಪರೀತ್ಯ ಉಂಟಾಗುವ ಬಗ್ಗೆ  ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು  ಮುನ್ಸೂಚನೆ ನೀಡಿದ್ದಾರೆ. ಹೀಗಾಗಿ ಯೆಲ್ಲೋ ಅಲರ್ಟ್(Yellow Alert) ಘೋಷಿಸಲಾಗಿದೆ.
.
ಈ ಅವಧಿಯಲ್ಲಿ, ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯಬಾರದು. ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗಬಾರದು. ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕೆಂದು ತಿಳಿಸಲಾಗಿದೆ.

ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು ಎಂದು ಉತ್ತರಕನ್ನಡ ಜಿಲ್ಲಾಡಳಿತ(Uttarakannada District Administration) ಪ್ರಕಟಣೆಯಲ್ಲಿ ತಿಳಿಸಿದೆ.

ತುರ್ತು ಸೇವೆಗಾಗಿ  24*7  ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಮ್ ಸಂಖ್ಯೆ(Control Room Number) 08382-229857 ಹಾಗೂ ವಾಟ್ಸಪ್ ಸಂಖ್ಯೆ 9483511015 ನ್ನು ಸಂಪರ್ಕಿಸಬಹುದು.

ಇದನ್ನು ಓದಿ : ಕಂಟೆನರ್ ವಾಹನಕ್ಕೆ ಬೈಕ್ ಢಿಕ್ಕಿ. ಸವಾರ ದುರ್ಮರಣ. ಇನ್ನೋರ್ವ ಗಂಭೀರ.

ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ನಟ ವಿಜಯ್ 20 ಲಕ್ಷ ಪರಿಹಾರ ಘೋಷಣೆ.

ತಮಿಳುನಾಡಿನ ಕರೂರಿನಲ್ಲಿ ಕಾಲ್ತುಳಿತ. 39 ಜನರ ಸಾವು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾರ್ವಜನಿಕರು ಸ್ವಯಂ ಮಾಹಿತಿ ದಾಖಲಿಸಲು ಅವಕಾಶ.