ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಅಕ್ಟೋಬರ್ 18ರವರೆಗೆ ರಾಜ್ಯಾದ್ಯಂತ ದಸರಾ ರಜೆ(Dasara Holiday) ವಿಸ್ತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiha) ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ(Census) ಬಾಕಿ ಇರುವ ಹಿನ್ನೆಲೆಯಲ್ಲಿ  ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ದಸರಾ ರಜೆ(Dasara Holiday) ವಿಸ್ತರಣೆ ಮಾಡಲಾಗುವುದು. ಶಾಲೆಯ ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗುವಂತೆ ಸಿಎಂ ತಿಳಿಸಿದ್ದಾರೆ.

  ನಮ್ಮ ನಿರೀಕ್ಷೆಯಂತೆ ಸಮೀಕ್ಷೆಗಳು ಪೂರ್ಣಗೊಂಡಿಲ್ಲ. ಹಾಗಾಗಿ ಶಿಕ್ಷಕರು ಕೂಡ ಇನ್ನಷ್ಟು ದಿನ ಸಮೀಕ್ಷೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆಯಲ್ಲಿ ಬಳಸಿಕೊಳ್ಳುವ ನಿಟ್ಟಿನಲ್ಲಿ   ಅಕ್ಟೋಬರ್ 18ರವರೆಗೆ ದಸರಾ ರಜೆ   ವಿಸ್ತರಿಸಲಾಗಿದೆ ಎಂದರು.

ನಾಳೆಯಿಂದ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆ ಇರಲಿದೆ. ಅರ್ಧವಾರ್ಷಿಕ ಪರೀಕ್ಷೆಗೆ ತೊಡಗಿಸಿಕೊಳ್ಳುವ ಶಿಕ್ಷಕರನ್ನು ಹೊರತುಪಡಿಸಿ ಉಳಿದ ಎಲ್ಲಾ ಶಿಕ್ಷಕರು ಸಮೀಕ್ಷೆಯಲ್ಲಿ ಭಾಗವಹಿಸಬೇಕು. ಇನ್ನೂ 12 ದಿನಗಳ ಒಳಗಾಗಿ ಸಮೀಕ್ಷೆ ಸಂಪೂರ್ಣವಾಗಿ ಮುಗಿಯಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನು ಓದಿ : ಕುವೈತ್ ದೇಶದಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ ವಂಚಿಸಿದ ಹೊನ್ನಾವರ ಮೂಲದ ಆಸಾಮಿಗಳು.

ದಾಂಡೇಲಿಯಲ್ಲಿ ಭಯ ಹುಟ್ಟಿಸುವ ಚಿರತೆ

ಹೆಲ್ಮೆಟ್ ಜಾಗೃತಿಗಾಗಿ ಬೈಕ್ ಓಡಿಸಿದ ಎಸ್ಪಿ