ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) :  ಕಾರವಾರದ ಆರೋಗ್ಯ ಸೇವೆಗಳ(Medical Service) ಕೊರತೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಾರವಾರ ಶಾಸಕ ಸತೀಶ್ ಸೈಲ್(Satish Sail)  ನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(Super Speciality Hospital) ಘೋಷಣೆ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ತಿಳಿಸಿದ್ದಾರೆ.

ಕಾರವಾರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, “ನವೆಂಬರ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಂಬಂಧ  ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಸರ್ಕಾರ ಮಾರ್ಚ್ ವೇಳೆಗೆ ಘೋಷಣೆ ಮಾಡುತ್ತದೆ ಎಂಬ ವಿಶ್ವಾಸವಿದೆ. ಆದರೆ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲವೆಂದರೆ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ನಂತರ ಯಾವ ರಾಜಕೀಯಕ್ಕೂ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಕಾರವಾರದ ಸಾರ್ವಜನಿಕರು ಆರೋಗ್ಯ ಸೇವೆಗಾಗಿ ಬೇರೆ ಜಿಲ್ಲೆಗಳು ಹಾಗೂ ಬೇರೆ ರಾಜ್ಯಗಳಿಗೆ ತೆರಳಬೇಕಾಗುತ್ತಿರುವ ಪರಿಸ್ಥಿತಿ ಅತ್ಯಂತ ವಿಷಾದಕರವಾಗಿದೆ. ನನಗೆ ಜನಸಾಮಾನ್ಯರ ಕಷ್ಟದ ಅರಿವಿದೆ. ಹೀಗಾಗಿ ಜನರ ಆರೋಗ್ಯ ಸೇವೆ ಮುಖ್ಯ. ಹೀಗಾಗಿ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅತೀ ಅಗತ್ಯವಿದೆ ಎಂದು ಹೇಳಿದರು.

ಶಾಸಕ ಸತೀಶ್ ಸೈಲ್(MLA Satish Sail) ಅವರ ಈ ಹೇಳಿಕೆ ಗಂಭೀರವಾಗಿದೆ. ಯಾಕಂದ್ರೆ ಕಳೆದ ಹಲವು ವರ್ಷಗಳಿಂದ ಉತ್ತರಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕೆಂದು ಜಿಲ್ಲೆಯ ಜನ ಒತ್ತಾಯಿಸುತ್ತಾ ಬಂದಿದ್ದಾರೆ. ಶಾಸಕರ ನಿವೃತ್ತಿಯ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

ಇದನ್ನು ಓದಿ : ಕನ್ನಡದ ಶ್ರೇಷ್ಠ ಹಾಸ್ಯ ಕಲಾವಿದ ರಾಜು ತಾಳಿಕೋಟೆ ನಿಧನ.