ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಅತ್ಯಧಿಕ ಪ್ರಮಾಣದ ಮಳೆಯಾಗುವ ಬಗ್ಗೆ ತಿಳಿಸಲಾಗಿದೆ.
ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು , ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್(Orange Alert) ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ(DC Lakshmipriya) ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, 45 ರಿಂದ 55 ಕೀಮೀ ವೇಗದಲ್ಲಿ ಸಮುದ್ರ ತೀರದಲ್ಲಿ ಗಾಳಿ ಬೀಸುವ ಸಾದ್ಯತೆಯ ಹಿನ್ನೆಲೆಯಲ್ಲಿ , ಮಳೆಯ ಜೊತೆಗೆ ಗಾಳಿ ಕೂಡಾ 45-55 ಕಿ.ಮೀ ವೇಗದಿಂದ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳಿರುವ ಪ್ರದೇಶದ ಮನೆಗಳ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಶಿಥಿಲವಾದ ಕಟ್ಟಡದಲ್ಲಿ ವಾಸಿಸುತ್ತಿರುವವರು ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕೆಂದು ತಿಳಿಸಿದ್ದಾರೆ.
ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯಬಾರದು. ಈ ಬಗ್ಗೆ ಉಪನಿರ್ದೇಶಕರು ಮೀನುಗಾರಿಕೆ ಇಲಾಖೆ ರವರು ಎಲ್ಲಾ ಮೀನುಗಾರರಿಗೆ ತಿಳುವಳಿಕೆ ನೀಡಿ ಪ್ರಕಟಣೆಯನ್ನು ಜಾರಿಗೆ ತರುವಂತೆ ತಿಳಿಸಲಾಗಿದೆ.
ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗಬಾರದು, ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು, ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿದೆ.
ತುರ್ತು ಸೇವೆಗಾಗಿ 24*7 ಕಂಟ್ರೋಲ್ ರೂಂ ಸಂಖ್ಯೆ 08382-229857, ವಾಟ್ಸಾಪ್ ಸಂಖ್ಯೆ. 9483511015 ಸಂಪರ್ಕಿಸುವoತೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು , ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉತ್ತರ ಕನ್ನಡ ಜಿಲ್ಲೆ ಅವರ ಪ್ರಕಟಣೆ ತಿಳಿಸಿದೆ.
ಇದನ್ನು ಓದಿ : ನಕಲಿ ಫೇಸ್ಬುಕ್ ಖಾತೆಯ ಮೂಲಕ ಸಚಿವ ಮಂಕಾಳ ವೈದ್ಯ ವಿರುದ್ದ ಅವಹೇಳನಕಾರಿ ಪೋಸ್ಟ್. ಓರ್ವ ಆರೆಸ್ಟ್.
ರಾ. ಹೆದ್ದಾರಿಯಲ್ಲಿರುವ ಚೆಕ್ ಪೋಸ್ಟ್ ಜಖಂ. ಘಟನೆ ಹೊಣೆ ಹೊರುವವರಾರು?
ಮುಂದಿನ ಸಿಎಂ ಸತೀಶ ಜಾರಕಿಹೊಳಿ. ನವೆಂಬರ್ ಕ್ರಾಂತಿ ಮೂನ್ಸೂಚನೆ ನೀಡಿದ ಸಿಎಂ ಪುತ್ರ.

