ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿಯಮಿತ ಕೋಡಿಬಾಗ, ಕಾರವಾರ ಇವರ ಆಶ್ರಯದಲ್ಲಿ ಅಕ್ಟೋಬರ್ 26 ಭಾನುವಾರದಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.
ಪ್ರಸ್ತುತ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕವನ್ನು ಪಡೆದು ಉತ್ತೀರ್ಣರಾದ ಮೀನುಗಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಮತ್ಸ್ಯ ಮಹಿಳಾ ಸ್ವಾವಲಂಬನಾ ಯೋಜನೆಯಡಿಯಲ್ಲಿ ಮೀನುಗಾರರ ಮಹಿಳೆಯರಿಗೆ ಚೆಕ್ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಕಾರವಾರ ನಗರದ ದಿವೇಕರ ಕಾಲೇಜು ಹತ್ತಿರ ಇರುವ ಸಾಗರ ದರ್ಶನ ಹಾಲ್ ನಲ್ಲಿ ಕಾರ್ಯಕ್ರಮ ಜರುಗಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರವಾರ ಮತ್ತು ಅಂಕೋಲಾ ಕ್ಷೇತ್ರದ ಶಾಸಕರಾದ ಸತೀಶ ಕೃಷ್ಣ ಸೈಲ್ ಗೌರವ ಘನ ಉಪಸ್ಥಿತಿ ವಹಿಸಲಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿಯಮಿತ ಅಧ್ಯಕ್ಷರಾಗಿರುವ ವೆಂಕಟೇಶ ಈರಾ ತಾಂಡೇಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಗಣಪತಿ ದುಮ್ಮಾ ಉಳ್ವೇಕರ, ಅತಿಥಿಗಳಾಗಿ ಜಿಲ್ಲಾಧಿಕಾರಿ ಶ್ರೀಮತಿ ಕೆ. ಲಕ್ಷ್ಮೀಪ್ರಿಯಾ, ಬೆಂಗಳೂರು ಮೀನುಗಾರಿಕೆ ನಿರ್ದೇಶಕರಾದ ದಿನೇಶ ಕಳ್ಳೇರ್ ಆಗಮಿಸಲಿದ್ದಾರೆ.
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಿದ ಮೀನುಗಾರ ಸಮುದಾಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಪಾಲಕರು, ಸಾರ್ವಜನಿಕರು ಅಂದು ಬೆಳಿಗ್ಗೆ 10-30ರೊಳಗೆ ಕಾರ್ಯಕ್ರಮದ ಸಭಾಭವನದಲ್ಲಿ ಹಾಜರಿರುವಂತೆ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿಯಮಿತ ಆಡಳಿತ ಮಂಡಳಿಯ ಅಧ್ಯಕ್ಚರು, ಸದಸ್ಯರು ಹಾಗೂ ಪ್ರಧಾನ ವ್ಯವಸ್ಥಾಪಕರು ಕೋರಿಕೊಂಡಿದ್ದಾರೆ.
ಇದನ್ನು ಓದಿ : ಮುರ್ಡೇಶ್ವರದ ಯಮುನಾ ನಾಯ್ಕ ಪ್ರಕರಣದ ನೈಜ ತನಿಖೆಗೆ ಇನ್ನೇಷ್ಟು ವರ್ಷ ಬೇಕು? ಆರೋಪಿಗಳ ಬಂಧನಕ್ಕೆ ಒತ್ತಾಯ.

