ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ(Sharavati Pumped Storage Project) ನೀಡಿರುವ ಅನುಮತಿ ಹಿಂಪಡೆಯಬೇಕು ಎಂದು ಒತ್ತಾಯಿಸಿ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರನ್ನು ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ(MP Vishweshwar Hegade Kageri) ಮತ್ತು ಯಲ್ಲಾಪುರ ‌ಶಾಸಕ ಶಿವರಾಮ ಹೆಬ್ಬಾರ(MLA Shivaram Hebbar) ನೇತೃತ್ವದಲ್ಲಿ ನಿಯೋಗ ಭೇಟಿ ಮಾಡಿತ್ತು. ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ(Bedti) ಮತ್ತು ಅಘನಾಶಿನಿ(Aghanashini) ಕಣಿವೆಗಳ ನದಿ ತಿರುವು ಯೋಜನೆಗಳನ್ನು ರಾಜ್ಯ ಸರ್ಕಾರ(State Government) ಕೈಬಿಡಬೇಕು.  ಹತ್ತಾರು ಬೃಹತ್ ಯೋಜನೆಗಳ ಭಯದಿಂದ ಉತ್ತರಕನ್ನಡ ನಲುಗಿ ಹೋಗಿದೆ. ಪರಿಸರ ಧಾರಣ ಸಾಮರ್ಥ್ಯ ಮುಗಿದಿದೆ. ಬೇಡ್ತಿ-ಅಘನಾಶಿನಿ-ಶರಾವತಿ ಯೋಜನೆಗಳು(Sharavati Project) ಜಾರಿಯಾದರೆ ಭಾರಿ ಅವಘಡಗಳು ನಡೆಯುವ ಗಂಭೀರ ಪರಿಸ್ಥಿತಿ ಉಂಟಾಗಲಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

ನದಿ ತಿರುವು ಯೋಜನೆಗಳನ್ನು ನಿಲ್ಲಿಸುವಂತೆ ಶಾಸಕ ಶಿವರಾಮ್ ಹೆಬ್ಬಾರ್​ ಒತ್ತಾಯಿಸಿದರು. ಒಂದು ವೇಳೆ  ಬೇಡ್ತಿ–ಅಘನಾಶಿನಿ–ಶರಾವತಿ ನದಿಗಳಲ್ಲಿ ಮುಂದೆ ನೀರೇ ಇಲ್ಲದ ಪರಿಸ್ಥಿತಿ ಬರಲಿದೆ  ಎಂದು ಶಾಸಕ ಭೀಮಣ್ಣ ನಾಯ್ಕ(MLA Bheemanna) ಅವರು ಆತಂಕ ವ್ಯಕ್ತ ಪಡಿಸಿದರು. ವನವಾಸಿಗಳ ಪರಿಸ್ಥಿತಿ ವನಗಳ ನಾಶದಿಂದ ಸಂಕಷ್ಟಕ್ಕೆ ಈಡಾಗಲಿದೆ. ನದಿ ಕಣಿವೆಗಳ ಎಲ್ಲ ಜನ ಸಮುದಾಯಗಳು, ಜೀವ ವೈವಿಧ್ಯಕ್ಕೆ(Bio Diversity) ಕುತ್ತು ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ(MLC Shantaram) ಸಿದ್ದಿ ಸಿಎಂ ಗಮನಕ್ಕೆ ತಂದಿದ್ದಾರೆ.

ಬೇಡ್ತಿ – ಅಘನಾಶಿನಿ ಸಮಿತಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಪಶ್ಚಿಮಘಟ್ಟದಲ್ಲಿ ಬೇಡ್ತಿ – ಅಘನಾಶಿನಿ – ಶರಾವತಿ ನದಿ(Aghanashini River) ಯೋಜನೆಗಳನ್ನು ಸ್ಥಗಿತಗೊಳಿಸಬೇಕು. ವಿಜ್ಞಾನಿಗಳು, ಜನಪ್ರತಿನಿಧಿಗಳು ಸಂಘಟನೆಗಳ ಜೊತೆ ವಿಶೇಷ ಪುನರ್ ವಿಮರ್ಶೆ ಮಾಡಬೇಕೆಂದು ಮುಖ್ಯ ಹೇಳಿದರು.

ಮನವಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ(CM Siddaramih), ಯೋಜನೆಗಳ ಕುರಿತು ಸಂಬಂಧಿಸಿದ ಇಲಾಖೆಗಳ ಜೊತೆ ಚರ್ಚಿಸಲಾಗುವುದು. ಬಳಿಕ ತಮ್ಮೆಲ್ಲರ ಜೊತೆಗೆ ವಿಜ್ಞಾನಿಗಳೊಂದಿಗೆ ಸಭೆ ಏರ್ಪಡಿಸಲಾಗುವುದು ಎಂದು ನಿಯೋಗಕ್ಕೆ  ಭರವಸೆ ನೀಡಿದ್ದಾರೆ. ಈ ವೇಳೆ ಸಾಮಾಜಿಕ ಕಾರ್ಯಕರ್ತ ವೆಂಕಟೇಶ ನಾಯ್ಕ, ಬಾಲಚಂದ್ರ ಸಾಯಿಮನೆ, ಸೇರಿದಂತೆ ಇತರರು  ಇದ್ದರು.
ಇದನ್ನು ಓದಿ : ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗೆ ಆಪಾತ್ಬಾಂಧವ ಈಶ್ವರ ಮಲ್ಪೆ ರಾಯಬಾರಿ.

ಕಡಲ ಅಲೆಯ ಅಬ್ಬರಕ್ಕೆ ಸಮುದ್ರ ಪಾಲಾದ ಸಿನೆಮಾ ಸೆಟ್. ಜ್ಯೂ. ಎನ್‌ಟಿಆರ್ ಅವರ ಬಹುಕೋಟಿಯ ಚಿತ್ರ.

ಮಕ್ಕಳನ್ನ ಒತ್ತೆಯಾಳಾಗಿಸಿಕೊಂಡ ಭೂಪ. ಪೊಲೀಸರ ನಡುವಿನ ಗುಂಡಿನ ಚಕಮಕಿಯಲ್ಲಿ ಫಿನಿಶ್.