ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಅದಿರು ಸಾಗಣೆ(Mines) ಮತ್ತು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಈಡಿ)(Enforcement Department) ದಾಖಲಿಸಿರುವ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್(Karwar MLA Satish Sail) ಅವರಿಗೆ ಗುರುವಾರದವರೆಗೆ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಿಸಿ ಹೈಕೋರ್ಟ್(HighCourt) ಆದೇಶಿಸಿದೆ.
ಶಾಸಕ ಸೈಲ್(Sail) ಅವರನ್ನು ಆರೋಗ್ಯ ತಪಾಸಣೆಗೆ(Health Check up) ಒಳಪಡಿಸಲು ವೃತ್ತಿಪರ ವೈದ್ಯರ ಹೆಸರನ್ನು ಸೂಚಿಸುವಂತೆ ಇಡಿಗೆ ನ್ಯಾಯಾಲಯ ಇದೇ ವೇಳೆ ನಿರ್ದೇಶಿಸಿದೆ.
ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ಹೊರಡಿಸಿರುವ ಜಾಮೀನುರಹಿತ ಬಂಧನ ವಾರೆಂಟ್ (ಎನ್ಬಿಡಬ್ಲ್ಯು) ಹಾಗೂ ಈಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ(Money Landuring) ಪ್ರಕರಣದಲ್ಲಿ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನು ರದ್ದುಪಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸತೀಶ್ ಸೈಲ್(Satish Sail) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಕೆಲ ಹೊತ್ತಿನವರೆಗೆ ಅರ್ಜಿ ಆಲಿಸಿದ ನ್ಯಾಯಪೀಠ, ಸೈಲ್ಗೆ ಮಂಜೂರು ಮಾಡಲಾಗಿರುವ ವೈದ್ಯಕೀಯ ಮಧ್ಯಂತರ ಜಾಮೀನನ್ನು ಗುರುವಾರದವರೆಗೆ ವಿಸ್ತರಿಸಿದೆ. ಈ ಮಧ್ಯೆ ಸೈಲ್ ಅವರ ಆರೋಗ್ಯ ಪರಿಸ್ಥಿತಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಅದನ್ನು ಖಾತ್ರಿಪಡಿಸಲು ಯಾವ ವೈದ್ಯರನ್ನು ನೇಮಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಇಡಿ ಸಲಹೆ ನೀಡಬೇಕು ಎಂದು ನ್ಯಾಯಪೀಠ ಆದೇಶಿಸಿತು.
ಶಾಸಕ ಸತೀಶ್ ಸೈಲ್ ಅವರು ಅನಾರೋಗ್ಯ ಪೀಡಿತರಾಗಿದ್ದಾರೆ ಎರಡು ಮಾತಿಲ್ಲ. ಅವರ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ದಾಖಲೆಗಳನ್ನು ಖಾತ್ರಿಪಡಿಸಬೇಕು. ಈ ವಿಚಾರದ ಕುರಿತು ಯೋಚಿಸಿ, ನ್ಯಾಯಾಲಯಕ್ಕೆ ತಿಳಿಸಿ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಅವರಿಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದೆ.
ನ್ಯಾಯಾಲಯದಲ್ಲಿ ಸೈಲ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿ, ಸೆಪ್ಟೆಂಬರ್ 11ರಂದು ಅರ್ಜಿದಾರರಿಗೆ ಮಧ್ಯಂತರ ವೈದ್ಯಕೀಯ ಜಾಮೀನು ಮಂಜೂರು ಮಾಡಲಾಗಿತ್ತು. ಸೈಲ್ ಅವರು ಸ್ಕೂಲಕಾಯ, ನಿದ್ರಾಹೀನತೆಯಿಂದ ಬಳಲುತ್ತಿದ್ದು ಅವರಿಗೆ ಯಕೃತ್ ಬದಲಾವಣೆ ಮಾಡಬೇಕು ಎಂದು ಇಎಸ್ಐ ಆಸ್ಪತ್ರೆ ವರದಿ ನೀಡಿರುವುದನ್ನು ಇಡಿ ದಾಖಲೆಗಳೇ ಹೇಳುತ್ತಿವೆ. ಅರ್ಜಿದಾರರು ಮಂಡಿಸಿರುವ ಯಾವುದೇ ದಾಖಲೆ ಸುಳ್ಳು ಅಥವಾ ಸರಿ ಇಲ್ಲ ಎಂದು ವಿಚಾರಣಾ ನ್ಯಾಯಾಲಯ ಹೇಳಿಲ್ಲ ಎಂದು ಹೇಳಿದರು.
ಅಕ್ಟೋಬರ್ ನಾಲ್ಕು ಮತ್ತು ಐದರಂದು ಸೈಲ್ ಅವರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿದೆ. ಹಾಗೂ ಅಕ್ಟೋಬರ್ ಏಳರಂದು ದೂರು ದಾಖಲಿಸಿದೆ. ಸೈಲ್ ಅವರ ಒಂದೇ ಒಂದು ವೈದ್ಯಕೀಯ ದಾಖಲೆ ಸುಳ್ಳು ಎಂದು ಹೇಳಲಾಗಿಲ್ಲ. ಆದರೆ, ನೀವು ಅನಾರೋಗ್ಯಪೀಡಿತ ವಿಭಾಗಕ್ಕೆ ಬರುವುದಿಲ್ಲ ಎಂದು ಹೇಳಲಾಗಿದ್ದು, ಎರಡು ಅಗತ್ಯತೆ ಇನ್ನೂ ನಿಮ್ಮ ಪ್ರಕರಣದಲ್ಲಿ ಬಾಕಿ ಇದೆ ಎಂದು ವಿಶೇಷ ನ್ಯಾಯಾಲಯ ಹೇಳಿದೆ ಎಂದು ಹೈಕೋರ್ಟ್ಗೆ(Highcourt) ಸೈಲ್ ಪರ ವಕೀಲರು ವಿವರಿಸಿದರು.
ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್, ಚೌಟ ಅವರು ಓದಿದ ಆದೇಶಗಳು ನನ್ನ ಬಳಿ ಇಲ್ಲ. ವಿಶೇಷ ನ್ಯಾಯಾಲಯ ಸೈಲ್ ಅವರನ್ನು ಜಾರಿ ನಿರ್ದೇಶನಾಲಯದ(Enforcement Department) ಕಸ್ಟಡಿಗೆ ನೀಡಿದ ಬಳಿಕ ಅವರು ಅನಾರೋಗ್ಯದ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಇಎಸ್ಐ(ESI) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವರದಿ ಆಧರಿಸಿ ಸೈಲ್ ಅವರನ್ನು ಮತ್ತೊಮ್ಮೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಆನಂತರ, ವಿಶೇಷ ನ್ಯಾಯಾಲಯ ಸೈಲ್ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನು ಮಂಜೂರು ಮಾಡಿತ್ತು ಎಂದು ತಿಳಿಸಿದರು.
ಸೈಲ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಬೇಕು ಎಂದು ಇಎಸ್ಐ ಆಸ್ಪತ್ರೆಯ ವರದಿಯಲ್ಲಿ ಹೇಳಲಾಗಿದೆ. ಆದರೆ, ಸೈಲ್ ಅವರು ಅಂಕೋಲಾ(Ankola), ಶಿರಸಿ(Sirsi) ಎಲ್ಲ ಕಡೆ ಓಡಾಡುತ್ತಿದ್ದು, ಸ್ಥಳೀಯ ಚುನಾವಣೆಯಲ್ಲಿ ಭಾಗವಹಿಸಿರುವುದು ತಿಳಿದು ಬಂದಿದೆ ಎಂದರು. ಆಗ ನ್ಯಾಯಪೀಠ, ಇದು ನಿಮ್ಮ ರಿಸ್ಕ್ಗೆ ಬಿಟ್ಟ ವಿಚಾರವಾಗಿದ್ದು, ನೀವು ರಿಸ್ಕ್ ತೆಗೆದುಕೊಳ್ಳಲು ಮುಂದಾದರೆ ನಿಮ್ಮ ಕೋರಿಕೆ ಪರಿಗಣಿಸಲಾಗುವುದು ಎಂದು ಹೇಳಿದೆ.
ಅದಕ್ಕೆ ಕಾಮತ್ ಅವರು, ವೈದ್ಯಕೀಯ ವರದಿ(Medical vReport) ಮತ್ತು ಸೈಲ್ ಪರಿಸ್ಥಿತಿಯನ್ನು ಪರಿಶೀಲಿಸುವ ಕುರಿತು ನ್ಯಾಯಾಲಯ ಹೇಳಿರುವುದಕ್ಕೆ ನಮ್ಮ ಒಪ್ಪಿಗೆ ಇದೆ. ಸಹಜವಾಗಿ ಹೇಳಬೇಕೆಂದರೆ ನಾವು ಆರೋಗ್ಯದ ವಿಚಾರದಲ್ಲಿ ತಜ್ಞರಲ್ಲ ಎಂದರು. ಆಗ ನ್ಯಾಯಪೀಠ, ಸೈಲ್ ಅವರ ಆರೋಗ್ಯ ಪರಿಸ್ಥಿತಿಯ ಕುರಿತು ತಿಳಿದು, ಅನಂತರ ನೋಡೋಣ ಎಂದು ನುಡಿಯಿತು. ಈ ವೇಳೆ, ಮಧ್ಯಪ್ರವೇಶಿಸಿದ ಚೌಟ ಅವರು, ವೈದ್ಯಕೀಯ ಮಂಡಳಿಯನ್ನು ರಚಿಸಿದರೆ ಆರೋಗ್ಯ ತಪಾಸಣೆಗೆ ಒಳಗಾಗಲು ಸೈಲ್ ಸಿದ್ಧರಿದ್ದಾರೆ ಎಂದರು.
ವಾದ ಮುಂದುವರಿಸಿದ ಕಾಮತ್ ಅವರು, ಜಾಮೀನು ರದ್ದತಿ ವಿಚಾರ ಏಕೆ ಬಂದಿದೆ ಎಂಬುದನ್ನು ನ್ಯಾಯಾಲಯ ಪರಿಶೀಲಿಸಬೇಕು. ಸೈಲ್ ಆಸ್ಪತ್ರೆಯಲ್ಲಿರಬೇಕು ಎಂದು ವರದಿ ಹೇಳಿದ್ದರೂ ಅದನ್ನು ಪಾಲಿಸಲಾಗುತ್ತಿಲ್ಲ. ಇಎಸ್ಐ ಆಸ್ಪತ್ರೆಯ(ESI Report) ವರದಿಯ ಅನುಪಾಲನೆಯನ್ನು ಸೈಲ್ ಮಾಡಬೇಕು. ಸೈಲ್ ಸಹಜವಾಗಿ ಓಡಾಟ ನಡೆಸುವಂತಿಲ್ಲ. ಒಂದು ಕಡೆ ಅನಾರೋಗ್ಯಪೀಡಿತ ಎಂದು ದಾಖಲೆ ತೋರಿಸುತ್ತಾರೆ. ಮತ್ತೊಂದೆಡೆ ಮುಕ್ತವಾಗಿ ಓಡಾಟ ನಡೆಸುತ್ತಿದ್ದಾರೆ. ಸಮೀಪದ ಒಳ್ಳೆಯ ಆಸ್ಪತ್ರೆಯಿಂದ ನೂರಾರು ಕಿ.ಮೀ. ದೂರ ಓಡಾಡುತ್ತಿದ್ದಾರೆ. ಈ ರಿಸ್ಕ್ ಅನ್ನು ಸೈಲ್ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ನ್ಯಾಯಾಲಯದ ಮುಂದೆ ಸುಳ್ಳನ್ನು ಬಿಂಬಿಸುತ್ತಿದ್ದಾರೆ ಎಂದರ್ಥ ಎಂದರು.
ಸೈಲ್ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂಬುದನ್ನು ತಿಳಿಸಿ. ಆರೋಗ್ಯ ಪರಿಸ್ಥಿತಿಯ ಸುರಕ್ಷಿತ ಪರಿಶೀಲನೆ ಬಗ್ಗೆ ತಿಳಿಸಿ ಎಂದು ನ್ಯಾಯ ಪೀಠ ಹೇಳಿತು. ಒಂದೆರಡು ದಿನ ಕಾಲಾವಕಾಶ ನೀಡಿದರೆ ತಿಳಿಸಲಾಗುವುದು ಎಂದು ಕಾಮತ್ ಹೇಳಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಮಧ್ಯಂತರ ವೈದ್ಯಕೀಯ ಜಾಮೀನನ್ನು ವಿಸ್ತರಿಸಿ, ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ನವೆಂಬರ್ 7ರಂದು ಪ್ರಕರಣದ ಸಂಬಂಧ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ, ಸಾಕ್ಷಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಎಲ್ಲ ಆರೋಪಿಗಳೂ ಹಾಜರಿರುವಾಗ ಮೊದಲ ಆರೋಪಿಯಾದ ಸೈಲ್ ಅವರ ಗೈರು ಹಾಜರಿಯನ್ನು ಮನ್ನಿಸಲಾಗದು. ಆದ್ದರಿಂದ, ಸತೀಶ್ ಸೈಲ್ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟು, ಜಾಮೀನುರಹಿತ ವಾರಂಟ್ ಹೊರಡಿಸಿತ್ತು. ಜತೆಗೆ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಜೂರು ಮಾಡಿದ್ದ ಮಧ್ಯಂತರ ವೈದ್ಯಕೀಯ ಜಾಮೀನನ್ನೂ ರದ್ದುಪಡಿಸಿತ್ತು.
ಇದನ್ನು ಓದಿ : ದೆಹಲಿ ಬಾರೀ ಸ್ಪೋಟ. ಹತ್ತಕ್ಕೂ ಹೆಚ್ಚು ಜನರ ದುರ್ಮರಣ. ದೇಶಾದ್ಯಂತ ಹೈ ಅಲರ್ಟ್.
ಪೋಷಕರೇ ಮಕ್ಕಳಿಗೆ ಆಹಾರ ನೀಡುವ ಮೊದಲು ಎಚ್ಚರ! ಬಿಸ್ಕೇಟ್ ನಲ್ಲಿ ಹುಳು ಪತ್ತೆ.
ನವೆಂಬರ್ 28ರಂದು ಗೋಕರ್ಣ ಪರ್ತಗಾಳಿಗೆ ಪ್ರಧಾನಿ ನರೇಂದ್ರ ಮೋದಿ .ಶ್ರೀರಾಮನ ಕಂಚಿನ ಮೂರ್ತಿ ಅನಾವರಣ.
ರಾತ್ರಿ ರಸ್ತೆಯಲ್ಲಿ ಬೃಹತ್ ಕಾಡಾನೆ ಪ್ರತ್ಯಕ್ಷ. ವಾಹನ ಸವಾರರ ಎದೆಯಲ್ಲಿ ನಡುಕ.

