ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೈಂದೂರು() : ಜಿಲ್ಲೆಯಲ್ಲಿ ಆರೋಗ್ಯ ಸೇವೆ(Health Service) ಸಮರ್ಪಕವಾಗಿ ಕಲ್ಪಿಸುವಂತೆ ಬೈಂದೂರು ಬಿಜೆಪಿ ಯುವ ಮೋರ್ಚಾ(BJP Yuva Moecha) ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ಒತ್ತಾಯಿದಿದ್ದಾರೆ.
ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯಿಂದ(Guarantee Scheme) ಇವತ್ತು ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳಿಗೆ ಕುಂದುಕೊರತೆಗಳಾಗುತ್ತಿವೆ. ಅದರಲ್ಲಿ ಮುಖ್ಯವಾಗಿ ಸರಕಾರಿ ಉಪ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ(PHC), ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸೇವೆ, ಸಿಬ್ಬಂದಿ ಮತ್ತು ವೈದ್ಯರ ವ್ಯವಸ್ಥೆಯನ್ನು ಸರಿಯಾಗಿ ಕಲ್ಪಿಸುವಂತೆ ಬೈಂದೂರು ಯುವ ಮೋರ್ಚಾ(Bainduru Yuva Morcha) ಆಗ್ರಹಿಸಿದೆ.
ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನ ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು. ತಾಲೂಕು ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ವಾಸ್ತವ್ಯ ಮಾಡಬೇಕು ಮತ್ತು ಸಕಾಲದಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯ ಇರುವಂತೆ ಮಾಡಬೇಕೆಂದರು.
ರಾತ್ರಿ ವೇಳೆಯಲ್ಲಿ ಅಪಘಾತಕ್ಕೆ ಒಳಪಟ್ಟು ಆಸ್ಪತ್ರೆಗೆ ಬಂದರೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಇಲ್ಲದಿರುವುದು ಆ ಸಂದರ್ಭದಲ್ಲಿ ವೈದ್ಯರು ಕೂಡ ಸಿಗುತ್ತಿಲ್ಲ ಎಂದು ಅಸಮಧಾನ ಹೊರ ಹಾಕಿದ ಗಜೇಂದ್ರ, ಬೈಂದೂರು ತಾಲೂಕು ಸಮುದಾಯ ಆರೋಗ್ಯ ಕೇಂದ್ರ ಅವ್ಯವಸ್ಥೆಗೆ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ವೈದ್ಯರು ಹಾಗೂ ಸಿಬ್ಬಂದಿ ಕೊರತೆ, ನಿರ್ವಹಣೆಯ ಕೊರತೆ, ಮತ್ತು ಅಗತ್ಯ ಸೌಲಭ್ಯಗಳಿಲ್ಲದ ಶಸ್ತ್ರಚಿಕಿತ್ಸಾ ಕೊಠಡಿ, ತುರ್ತು ನಿಗಾ ಘಟಕಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ, ಬಳಕೆಯಲ್ಲಿಲ್ಲ. ಇದರಿಂದಾಗಿ, ಉಚಿತ ವೈದ್ಯಕೀಯ ಸೇವೆಗಳನ್ನು ಪಡೆಯುವಲ್ಲಿ ನಾಗರಿಕರು ತೊಂದರೆ ಎದುರಿಸುತ್ತಿದ್ದಾರೆ. ಇದರಿಂದ ರೋಗಿಗಳು ಖಾಸಗಿ ಆಸ್ಪತ್ರೆಗಳ ಮೇಲೆ ಅವಲಂಭನೆ ಹೆಚ್ಚಾಗಿದೆ ಎಂದಿದ್ದಾರೆ.
ಆಸ್ಪತ್ರೆಯ ಆಂತರಿಕ ಆಡಳಿತ ಸರಿಯಾಗಿಲ್ಲ, ಕೆಲವೊಂದು ಸಂದರ್ಭಗಳಲ್ಲಿ ಹಿರಿಯ ವೈದ್ಯರ ವರ್ತನೆ ಕೂಡ ಹೊಸ ವೈದ್ಯರು ಕಾರ್ಯನಿರ್ವಹಿಸಲು ಅಡ್ಡಿಯಾಗುತ್ತಿದೆ. ಉಚಿತ ಔಷಧಿ, ಮತ್ತು ಬೆಡ್‌ಗಳ ಕೊರತೆಯೂ ಸಮಸ್ಯೆಯಾಗಿದೆ. ಇದನ್ನ ಸರಿಪಡಿಸಲು ರಾಜ್ಯ ಸರಕಾರ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಆಧುನಿಕ ವೈದ್ಯಕೀಯ ಉಪಕರಣಗಳ ಅಳವಡಿಕೆ ಸರಿಯಾಗಿಲ್ಲ.
ಹೀಗಾಗಿ ಗ್ರಾಮೀಣ ಭಾಗದಲ್ಲೂ ತಜ್ಞವೈದ್ಯರ ಸೇವೆ ಲಭ್ಯವಾಗುವಂತೆ ಟೆಲಿಮೆಡಿಸಿನ್ ಜಾಲವನ್ನು ಬಲಪಡಿಸಬೇಕು. ಗ್ರಾಮೀಣ ಪ್ರದೇಶದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಬಲಪಡಿಸಬೇಕು. ಆಸ್ಪತ್ರೆಗಳಲ್ಲಿ ಲ್ಯಾಬ್ ನಿರ್ವಹಣೆಗೆ ತಾಂತ್ರಿಕ ತಜ್ಞರನ್ನು ನೇಮಿಸುವುದು ಮತ್ತು ಅತ್ಯಾಧುನಿಕ ತುರ್ತು ನಿಗಾ ಘಟಕಗಳ ವ್ಯವಸ್ಥೆ ಮಾಡುವುದು. ಗ್ರಾಮೀಣ ಪ್ರದೇಶಗಳಲ್ಲಿ ರಕ್ತ ನಿಧಿಗಳನ್ನು ಸ್ಥಾಪಿಸುವುದು. ರಾಜ್ಯದ ಪ್ರತಿಯೊಬ್ಬ ನಾಗರಿಕರಿಗೂ ‘ಹೆಲ್ತ್ ಕಾರ್ಡ್’ ನೀಡಿ, ವೈದ್ಯಕೀಯ ಸೇವೆಗಳನ್ನು ಸುಲಭವಾಗಿಸಬೇಕೆಂದು ಒತ್ತಾಯಿಸಿದರು.
ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಮುತುವರ್ಜಿಯಿಂದಾಗಿ ಈಗಾಗಲೇ ಪಟ್ಟಣ ಪಂಚಾಯತ್ ನ ಎರಡು ಗ್ರಾಮಗಳಲ್ಲಿ ನಮ್ಮ ಕ್ಲಿನಿಕ್ ನ ಸೇವೆಗಳು ಪ್ರಾರಂಭವಾಗಿದೆ, ಅಲ್ಲದೆ ವಿಶೇಷವಾಗಿ ದಾನಿಗಳ ನೆರವಿನಿಂದ ಡಯಾಲಿಸಿಸ್ ಸೆಂಟರ್ ಪ್ರಾರಂಭ ಮಾಡಿದ್ದಾರೆ.
ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ, ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ಗಮನಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸರಕಾರ ವಿರುದ್ದ ಬೈಂದೂರು ತಾಲೂಕು ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಬೈಂದೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಪ್ರದೀಪ್ ಉಪ್ಪುಂದ, ಜಗದೀಶ್ ಆಲoದೂರು, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಆಜ್ರಿ, ಬೈಂದೂರು ಬಿಜೆಪಿ ಮಂಡಲ ಕಾರ್ಯದರ್ಶಿ ರಾಜೇಂದ್ರ ಬಿಜೂರು ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಇದನ್ನು ಓದಿ : ಬಲತ್ಕಾರ, ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ.
ಮುಂಡಗೋಡಿಗೆ ಟಿಬೇಟಿಯನ್ ಧರ್ಮಗುರು ದಲಾಯಿಲಾಮ. ಹೆಚ್ಚಿನ ಪೊಲೀಸ್ ಬಂದೋಬಸ್ತ್.
ಹಬ್ಬುವಾಡ ರಸ್ತೆ ಅವ್ಯವಸ್ಥೆ. ಡಿಸೆಂಬರ್ 16 ಕ್ಕೆ ಕುಡಿಕೆಯಲ್ಲಿ ಭಿಕ್ಷೆ ಬೇಡುವ ವಿನೂತನ ಪ್ರತಿಭಟನೆ.
