ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಗೋಕರ್ಣ(Gokarn) : ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಹೊಸಕೇರಿ(Gokarn Hosakeri) ಪ್ರದೇಶದಲ್ಲಿ ಶನಿವಾರ ನಸುಕಿನ ಜಾವ ಭಾರೀ ಅಗ್ನಿ ಅವಘಡ(Fire Incident) ಸಂಭವಿಸಿದೆ.
ಅಗ್ನಿ ಅನಾಹುತದಲ್ಲಿ ಕಟ್ಟಿಗೆ ಮಿಲ್(Saw Mill) ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಈ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕಟ್ಟಿಗೆ ಸಂಪೂರ್ಣವಾಗಿ ನಾಶವಾಗಿದೆ.
ಶಂಕರ ಈರಯ್ಯ ಆಚಾರ್ಯ ಅವರಿಗೆ ಸೇರಿದ ಕಟ್ಟಿಗೆ ಮಿಲ್ಲಿನಲ್ಲಿ ಬೆಳಿಗ್ಗೆ ಎರಡು ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಮಿಲ್‌ನಾದ್ಯಂತ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ(Fire Brigade) ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿದ ತಕ್ಷಣ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ, ಸಿಬ್ಬಂದಿಗಳು ಹಲವು ಗಂಟೆಗಳ ಕಾಲ ಶ್ರಮಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆ ಗೋಕರ್ಣ ಪೊಲೀಸ್ ಠಾಣಾ(Gokarn Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಕಾಣಿಸಿಕೊಂಡ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಗೋಕರ್ಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : ಜಿಲ್ಲೆಯ ಆರೋಗ್ಯ ವ್ಯವಸ್ಥೆ ಸುಧಾರಿಸಲು ಬಿಜೆಪಿ ಯುವ ಮೋರ್ಚಾ ಆಗ್ರಹ.
ನಟ ದರ್ಶನ್ ಅವರ ಡೆವಿಲ್ ಹೊಸ ದಾಖಲೆ, ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತೇ?
ಬಲತ್ಕಾರ, ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ.
ಮುಂಡಗೋಡಿಗೆ ಟಿಬೇಟಿಯನ್ ಧರ್ಮಗುರು ದಲಾಯಿಲಾಮ. ಹೆಚ್ಚಿನ ಪೊಲೀಸ್ ಬಂದೋಬಸ್ತ್.
