ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಮಂಗಳೂರು(Mangalore) : ಗದ್ದೆಯಲ್ಲಿ ಕೋಳಿ ಅಂಕಕ್ಕೆ ಸಿದ್ದತೆ ನಡೆಯುವ ವೇಳೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ ಘಟನೆ ದಕ್ಷಿಣಕನ್ನಡ(South Canara) ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ.
ನಿನ್ನೆ ಮುರಳೀಧರ ರೈ ಎಂಬವರ ಗದ್ದೆಯಲ್ಲಿ, ಕಾನೂನುಬಾಹಿರವಾಗಿ ಕೋಳಿ ಅಂಕ ಆಡಲು ಮುಂದಾಗುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಸಾಕಷ್ಟು ಜನರು ಕೋಳಿಗಳನ್ನು ಹಿಡಿದು ಗುಂಪು ಸೇರಿದ್ದರು. ಆಗ ಪೊಲೀಸರು ಜನರಿಗೆ ಕಾನೂನುಬಾಹಿರ(Illegal ) ಕೋಳಿ ಅಂಕದ ಬಗ್ಗೆ ಸೂಕ್ತ ಕಾನೂನು ತಿಳುವಳಿಕೆ ನೀಡಿದ್ದರು.
ಈ ಸಂದರ್ಭದಲ್ಲಿ ಹಾಜರಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು(Putturu MLA), ಸ್ಥಳದಲ್ಲಿ ಸೇರಿದ್ದ ಜನರಿಗೆ ಸಾಂಪ್ರದಾಯಿಕ ಕೋಳಿ ಅಂಕವನ್ನು ನಿಲ್ಲಿಸಬಾರದು ಎಂದು ಪ್ರಚೋದನೆ ಮತ್ತು ದುಷ್ಟೇರಣೆಯನ್ನು ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಕೋಳಿ ಅಂಕಕ್ಕೆ ಬಂದವರು ಕಾನೂನು ಬಾಹಿರವಾಗಿ ಕೋಳಿ ಅಂಕ ಆಟವನ್ನು ಶುರು ಮಾಡಿದ್ದಾರೆ. ಆಗ ಪೊಲೀಸರು ಹೆಚ್ಚಿನ ಭದ್ರತೆಯನ್ನು ಏರ್ಪಡಿಸಿ, ಸದ್ರಿ ಕಾನೂನು ಬಾಹಿರವಾಗಿ ಕೋಳಿ ಅಂಕ ಆಟ ಆಡುತ್ತಿದ್ದ 16 ಜನರನ್ನು ವಶಕ್ಕೆ ಪಡೆದು, 22 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಕತ್ತಿಗಳನ್ನು ವಶಪಡಿಸಿಕೊಂಡಿದ್ದರು.
ಈ ಸಂಬಂಧ ಗದ್ದೆಯ ಮಾಲೀಕ ಮರಳೀಧರ ರೈ ಎಂಬುವವರು ಯಾವುದೇ ಸೂಕ್ತ ಪರವಾನಿಗೆ ಪಡೆಯದೇ, ಕಾನೂನು ಬಾಹಿರ ಕೃತ್ಯಕ್ಕೆ ಅನುವು ಮಾಡಿಕೊಟ್ಟಿದ್ದಕ್ಕೆ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಕಾನೂನು ಬಾಹಿರ ಕೃತ್ಯವನ್ನು ನಡೆಸಲು ಪ್ರಚೋದನೆ ಮತ್ತು ಪ್ರೇರಣೆ ನೀಡಿದ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಶಾಸಕರು ಸೇರಿ 16 ಜನರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ(Vitla Police Station) ಪ್ರಕರಣ ದಾಖಲಿಸಲಾಗಿದೆ.
ಇದನ್ನು ಓದಿ : ಏಳು ದಿನಗಳ ಕರಾವಳಿ ಉತ್ಸವದ ಕಾರ್ಯಕ್ರಮಗಳ ವಿಶೇಷ.
