ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಚಿತ್ರದುರ್ಗ (Chitradurga) : ಹಿರಿಯೂರು(Hiriyuru) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ.

ಭೀಕರ ಅಪಘಾತದಲ್ಲಿ 9 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ (Bangalore To Gokarn) ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಬಳಿಕ ಬಸ್ಗೆ ಬೆಂಕಿ ತಾಗಿ ಹೊತ್ತಿ ಉರಿದಿದೆ. ಪರಿಣಾಮವಾಗಿ ಒಂಬತ್ತು ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ(IGP Ravikantegouda) ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ(Bangalore to Gokarn) ಕಡೆ ತೆರಳುತಿದ್ದ ಬಸ್ ಗೆ (KA 01 AE 5217) ಎದುರಿನಿಂದ ಬಂದ ಕಂಟೇನರ್ ಲಾರಿ(Container Lorry) ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ದಾಟಿ ಬಂದು ಬಸ್ಸಿನ ಡೀಸೆಲ್ ಟ್ಯಾಂಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದ್ದರಿಂದ ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತುಕೊಂಡಿದೆ. ನೋಡನೋಡುತ್ತಲೇ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ.
ದುರ್ಘಟನೆಯಲ್ಲಿ ಲಾರಿ ಚಾಲಕ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಯ ತೀವ್ರತೆಯಿಂದಾಗಿ ಮೃತ ದೇಹಗಳು ಗುರುತು ಹಿಡಿಯಲಾರದಷ್ಟು ಸುಟ್ಟು ಕರಕಲಾಗಿವೆ. ಈಗಾಗಲೇ ಬಸ್ಸಿನಿಂದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತರ ಗುರುತು ಪತ್ತೆ ಹಚ್ಚೋದು ಸಾಧ್ಯವಾಗದೇ ಇರುವುದರಿಂದ ಬೆಂಗಳೂರಿನ ವಿಧಿವಿಜ್ಞಾನ ಮತ್ತು ಡಿಎನ್‌ಎ (DNA) ತಂಡಗಳನ್ನು ಕರೆಸಲಾಗಿದೆ ಎಂದು ಐಜಿಪಿ ರವಿಕಾಂತೆಗೌಡ ತಿಳಿಸಿದ್ದಾರೆ.
ಬಸ್ಸಿನಲ್ಲಿ ಬೆಂಗಳೂರಿನ ಮಾವಳ್ಳಿ ಭಾಗದ 7 ಮಂದಿ ಗೆಳೆಯರು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ದುರದೃಷ್ಟವಶಾತ್, ಈ ತಂಡದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಶಿರಾ(Shira) ಮತ್ತು ಹಿರಿಯೂರು ಆಸ್ಪತ್ರೆಗಳಲ್ಲಿ(Hiriyuru Hospital) ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯಗೊಂಡವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ(Victoria Hospital) ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (Hiriyuru Rural Police Station) ಪ್ರಕರಣ ದಾಖಲಾಗಿದೆ.
ಇದನ್ನು ಓದಿ : ಕಾರವಾರದಲ್ಲಿ ಹುಚ್ಚೆದ್ದು ಕುಣಿದ ಪ್ರೇಕ್ಷಕರು. ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್.
ಹೊನ್ನಾವರ: ಮಂಕಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ
ಕಾರವಾರದಲ್ಲಿ ಕೈಗಾ ಉದ್ಯೋಗಿ ಲೈವ್ ಸೂಡ್. ಮಲ್ಲಾಪುರ ಠಾಣೆಯಲ್ಲಿ ಪ್ರಕರಣ.*
