ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ತಾಲೂಕಿನ ಅಮದಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ(NH 66) ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ(Bike and Scooty Collision) ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅಂಕೋಲಾ ತಾಲೂಕಿನ ಅವರ್ಸಾದಿಂದ ಅಮದಳ್ಳಿಯತ್ತ(Aversa to Amadalli) ಬರುತ್ತಿದ್ದ ಸ್ಕೂಟಿ ಸವಾರ ಸಚಿನ್ ತಳೇಕರ್ (38) ಗಂಭೀರ ಗಾಯಗೊಂಡವರು. ಅಮದಳ್ಳಿಯಿಂದ ಮುದಗಾದತ್ತ(Amadalli To Mudga) ತೆರಳುತ್ತಿದ್ದ ಬೈಕ್ ಸವಾರ ಹೆದ್ದಾರಿಯಲ್ಲಿ ಎದುರಾದ ಪರಿಣಾಮ ಎರಡು ವಾಹನಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ.
ಡಿಕ್ಕಿ ರಭಸಕ್ಕೆ ಬೈಕ್ ಹಾಗೂ ಸ್ಕೂಟಿ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಚಿನ್ ತಳೇಕರ್ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಕಾರವಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಘಟನೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆ(Karwar Rural Station) ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಇದನ್ನು ಓದಿ : ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆಯ ಬಗ್ಗೆ ಹವಮಾನ ಇಲಾಖೆ ಎಚ್ಚರಿಕೆ.
ಕುಮಟಾ ಪೊಲೀಸರ ಕಾರ್ಯಾಚರಣೆ. ಪೆಟ್ರೋಲ್ ಬಂಕ್ ಕಳ್ಳತನ ಪ್ರಕರಣದಲ್ಲಿ ಬಾಗಿಯಾದ ಇಬ್ಬರ ಬಂಧನ.
