ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಅಂಕೋಲಾ(Ankola) : ರಾಷ್ಟ್ರೀಯ ಹೆದ್ದಾರಿ 52(National Highway) ತಾಲೂಕಿನ ಸುಂಕಸಾಳ(Sunkasala) ಬಳಿ ಇಂದು ಬೆಳಿಗ್ಗೆ ಭೀಕರ ಸರಣಿ ಅಪಘಾತ(Accident) ಸಂಭವಿಸಿದೆ.
ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎರಡು ಖಾಸಗಿ ಬಸ್‌ಗಳು(Private Busses) ಹಾಗೂ ಒಂದು ಲಾರಿ(Lorry) ನಡುವೆ ಈ ಅಪಘಾತ ಸಂಭವಿಸಿದೆ. ಹಂಪಿಯಿಂದ ಗೋವಾ(Hampi to Goa) ಕಡೆಗೆ ತೆರಳುತ್ತಿದ್ದ ಸೀಬರ್ಡ್ ಬಸ್(Seabird Bus) ಹಾಗೂ ಹುಬ್ಬಳ್ಳಿ ಕಡೆಯಿಂದ ಮಂಗಳೂರು(Hubli to Mangalore) ಕಡೆ ಚಲಿಸುತ್ತಿದ್ದ ಗಣೇಶ ಬಸ್(Ganesh Bus) ಮತ್ತು ಅಂಕೋಲಾ ಕಡೆಯಿಂದ ಯಲ್ಲಾಪುರ(Ankola to Yallapur) ಕಡೆಗೆ ಸಾಗುತ್ತಿದ್ದ ಲಾರಿ ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.

ಅಪಘಾತದ ಪರಿಣಾಮವಾಗಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಐದಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಕಾರವಾರದ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕ್ರಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ(National Highway) ಕೆಲ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಸೇರಿ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಆರಂಭಿಸಿದ್ದಾರೆ.

ಘಟನಾ ಸ್ಥಳಕ್ಕೆ ಸುಂಕಸಾಳ ಹಾಗೂ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವು ಅಂಕೋಲಾ ಪೊಲೀಸ್ ಠಾಣೆ(Ankola Police Station) ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇದನ್ನು ಓದಿ : ನಡು ರಸ್ತೆಯಲ್ಲಿ ಎದೆ ಝಲ್ಲೆನಿಸಿದ ಆನೆ. ಮೊಬೈಲ್ ನಲ್ಲಿ ದೃಶ್ಯ ಸೆರೆ.