ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಗದಗ(Gadag) : ಲಂಚ ಸ್ವೀಕಾರದಆರೋಪದಮೇಲೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ(BJP MLA Dr Chandru Lamani) ಅವರನ್ನು ಲೋಕಾಯುಕ್ತ(Lokayukta) ಅಧಿಕಾರಿಗಳು ಬಂಧಿಸಿದ್ದಾರೆ.
ಧಾರವಾಡ ಲೋಕಾಯುಕ್ತ(Dharwad Lokayukta SP) ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಗೆ(Balaji Hospital) ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಶಾಸಕರಿಗೆ ಸಂಬಂಧಿಸಿದ ಈ ಆಸ್ಪತ್ರೆಯ ಕೆಳಮಹಡಿಯಲ್ಲಿ ₹4.5 ಲಕ್ಷ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಗುತ್ತಿಗೆದಾರ ವಿಜಯ ಪೂಜಾರರಿಂದ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಒಟ್ಟು ₹11 ಲಕ್ಷ ಒಪ್ಪಂದದ ಮಾತುಕತೆ ನಡೆದಿದ್ದು, ಅದರ ಭಾಗವಾಗಿ ₹5 ಲಕ್ಷ ಹಣ ಸ್ವೀಕರಿಸುವ ವೇಳೆ ದಾಳಿ ನಡೆದಿರುವುದಾಗಿ ಮೂಲಗಳು ತಿಳಿಸಿವೆ.
ಗದಗ ಜಿಲ್ಲೆಯ(Gadaga District) ಸಂಕನಾಳ ಗ್ರಾಮದ(Sunkanal Village) ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸುಮಾರು ₹1 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಈ ಕಾಮಗಾರಿಗೆ ಸಂಬಂಧಿಸಿದಂತೆ ಹಣದ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.
ದಾಳಿಯ ವೇಳೆ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿಎ ಗುರು ಲಾವಣಿ ವಿಚಾರಣೆಗೆ ಒಳಗಾಗಿದ್ದಾರೆ. ಮಾಹಿತಿ ಪ್ರಕಾರ, ₹50 ಸಾವಿರವನ್ನು ಕಾಗದದ ಬಂಡಲ್ನಲ್ಲಿ ಹಾಕಿ ಸಮೀಪದ ಖಾಸಗಿ ಶಾಲೆ ಬಳಿ ಎಸೆಯಲಾಗಿದೆ. ತಕ್ಷಣ ಧಾವಿಸಿದ ಲೋಕಾಯುಕ್ತ(Lokayukta) ಅಧಿಕಾರಿಗಳು ಆ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಆಸ್ಪತ್ರೆ ಸುತ್ತಮುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಮೂರು ಸಿಪಿಐ, ಮೂರು ಪಿಎಸ್ಐ ಮತ್ತು ಒಂದು ಡಿಆರ್ ತುಕಡಿ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ.
ಇದೀಗ ಶಾಸಕ ಡಾ. ಚಂದ್ರ ಲಮಾಣಿ ಸೇರಿದಂತೆ ಇಬ್ಬರು ಪಿಎಗಳನ್ನು ಬಂಧಿಸಿ, ಗದಗ ಲೋಕಾಯುಕ್ತ(Gadag Lokayukta) ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.
ಇದನ್ನು ಓದಿ : ಮುರ್ಡೇಶ್ವರದಲ್ಲಿ ಗೆಸ್ಟ್ ಹೌಸ್ ಮೇಲೆ ದಾಳಿ. ಇಬ್ಬರು ಮಹಿಳೆಯರ ರಕ್ಷಣೆ.
