ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಕಾರವಾರ(Karwar) : ಉತ್ತರಕನ್ನಡ ಜಿಲ್ಲೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiha) ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ(DCM D K Shivakumar)  ಫೆ.22 ರಂದು  ಪ್ರವಾಸ ಕೈಗೊಳ್ಳಲಿದ್ದಾರೆ. ಸಿಎಂ ಮತ್ತು ಡಿಸಿಎಂ ಮೊದಲ ಬಾರಿಗೆ ಒಟ್ಟಾಗಿ ಆಗಮಿಸುತ್ತಿರುವುದು ತೀವೃ ಕುತೂಹಲಕ್ಕೆ ಕಾರಣವಾಗಿದೆ.

ಈ ಹಿಂದೆ ಕಾರವಾರ ಶಾಸಕ ಸತೀಶ ಸೈಲ್(Karwar MLA Satish Sail) ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ಸೂಪರ್ ಸ್ಪೆಷಲಿಟಿ ಆಸ್ಪತ್ರೆ(Super Speciality Hospital) ಮಾಡಬೇಕು. ಬಜೆಟ್ ನಲ್ಲಿ ಹಣ ಮೀಸಲಿಡಬೇಕೆಂದು ಒತ್ತಾಯಿಸಿದ್ದರು. ಇಲ್ಲದಿದ್ದಲ್ಲಿ ತಾವು ರಾಜೀನಾಮೆ ನೀಡಲು ಸಿದ್ದರಿರುವುದಾಗಿ ಎಚ್ಚರಿಕೆ ನೀಡಿದ್ದರು. ಶಾಸಕರ ರಾಜೀನಾಮೆ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು.

ಅಂದಿನಿಂದ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ(Karwar Medical College) ನೂತನ ಕಟ್ಟಡಕ್ಕೆ ಜಿಲ್ಲಾಸ್ಪತ್ರೆ ಸ್ಥಳಾಂತರಗೊಂಡು ಕಾರ್ಯ ನಿರ್ವಹಣೆ ಆರಂಭಗೊಂಡಿತು. ಅಲ್ಲದೇ ಆಸ್ಪತ್ರೆಗೆ ಬೇಕಾಗುವ ಪರಿಕರಗಳ ಪೂರೈಕೆಯನ್ನು ಸರ್ಕಾರದಿಂದ ಮಾಡಲಾಗಿತ್ತು. ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ ಜೋಡೆತ್ತುಗಳಾಗಿ ಆಗಮಿಸುತ್ತಿದ್ದಾರೆ. ಅಲ್ಲದೇ ಭಾನುವಾರದ ಕಾರ್ಯಕ್ರಮದಲ್ಲಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆ(Super Speciality Hospital) ಘೋಷಣೆಯಾಗುವ ಸಾಧ್ಯತೆ ಇದೆ.

ಬೆಳಿಗ್ಗೆ 11.50 ಕ್ಕೆ ಮಂಜುಗುಣಿ ಗ್ರಾಮದಲ್ಲಿ(Manjuguni Village), ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ(Gangavali Village) ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾಗವಹಿಸಲಿದ್ದಾರೆ.

ನಂತರ ಮಧ್ಯಾಹ್ನ 12.45 ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಮತ್ತು ಯಲ್ಲಾಪುರ(Yallapur) ತಾಲೂಕಿನ ಖಾನಾಪುರ ತಾಳಗುಪ್ಪ(Khanapur Talaguppa) ರಾಜ್ಯ ಹೆದ್ದಾರಿ-93 ರ ಕಿ.ಮೀ 82.50 ರಲ್ಲಿ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ನಿರ್ಮಾಣ ಹಾಗೂ ಮುಂಡಗೋಡ(Mundgod) ತಾಲೂಕಿನ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಿಎಂ ಡಿಸಿಎಂ ಕಾರ್ಯಕ್ರಮ ಯಶಸ್ವಿಗೊಳಿಸುವ ಹಿನ್ನಲೆಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಿದ್ದತೆ ಮಾಡಿಕೊಂಡಿದೆ.

ಇದನ್ನು ಓದಿ : ಭಟ್ಕಳದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ

ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ. ಐದು ಲಕ್ಷ ರೂ. ಹಣ ಪಡೆಯುವಾಗ ಅಧಿಕಾರಿಗಳ ದಾಳಿ.