ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಮುಂದಿನ ಬಜೆಟ್ನಲ್ಲಿ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(Super speciality Hospital) ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiha) ಭರವಸೆ ನೀಡಿದರು.
ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super speciality Hospital) ಸ್ಥಾಪನೆಯಾದರೆ ಗಂಭೀರ ಚಿಕಿತ್ಸೆಗೆ ಹುಬ್ಬಳ್ಳಿ(Hubli) ಹಾಗೂ ಮಂಗಳೂರು(Mangalore) ಕಡೆಗೆ ತೆರಳುವ ಅವಶ್ಯಕತೆ ತಪ್ಪುತ್ತದೆ ಎಂದು ಅವರು ಹೇಳಿದರು. ಕಾರವಾರದಲ್ಲಿ(Karwar) ಇಂತಹ ಆಸ್ಪತ್ರೆಗೆ ಬಹುಕಾಲದಿಂದಲೂ ಬೇಡಿಕೆ ಇದ್ದು, ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.
ಈ ಸಂಬಂಧ ಆರೋಗ್ಯ ಸಚಿವ ಶರಣಪ್ರಕಾಶ ಪಾಟೀಲ್ (Sharan Prakash Patil) ಅವರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super speciality Hospital) ಸ್ಥಾಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.
“ಶ್ರೀಮಂತರು ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ಬಡವರಿಗೆ(Poor People) ಆರ್ಥಿಕ ಸಾಮರ್ಥ್ಯ ಇಲ್ಲ. ಅವರು ಸರ್ಕಾರಿ ಆಸ್ಪತ್ರೆಗೆ ಅವಲಂಭಿತರಾಗಿದ್ದಾರೆ. ಸಾಮಾನ್ಯ ಜನರ ವಿಶ್ವಾಸದ ಕೇಂದ್ರವಾಗಿರುವ ಸರ್ಕಾರಿ ಆಸ್ಪತ್ರೆಗಳನ್ನೇ(Government Hospital) ಇನ್ನಷ್ಟು ಬಲಪಡಿಸಲು ಸರ್ಕಾರ ಬದ್ಧವಾಗಿದೆ,” ಎಂದು ಅವರು ತಿಳಿಸಿದರು.
ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super speciality Hospital) ಆರಂಭಿಸುವ ಯೋಜನೆ ಸರ್ಕಾರದ ಮುಂದಿದೆ. ಜೊತೆಗೆ ಎಲ್ಲ ಕಡೆ ಕ್ಯಾನ್ಸರ್ ಚಿಕಿತ್ಸಾ ಘಟಕ (Cancer Unit)ಗಳನ್ನು ಸ್ಥಾಪಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆ(Guarantee Scheme) ಮಾಡಿ ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡಿಲ್ಲ ಅಂತಾ ಇದ್ದರು. ಹಾಗಾದ್ರೆ ಈ ಆಸ್ಪತ್ರೆ ಉದ್ಘಾಟನೆ ಹೇಗಾಗುತ್ತಿದೆ ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ(CM Siddaramaiha), ನಾವು ಅಭಿವೃದ್ದಿ ಕೆಲಸ ಮಾಡುತ್ತಿದ್ದೇವೆ, ಗ್ಯಾರಂಟಿಯನ್ನ ಸಹ ಕೊಡ್ತಾ ಇದ್ದೇವೆ. 2954 ಕೋಟಿ ಹಣ ಸರ್ಕಾರ ಬಂದ ಮೇಲೆ ಗ್ಯಾರಂಟಿಗಾಗಿ ಕೊಟ್ಟಿದ್ದೇವೆ. ರಾಜ್ಯದಲ್ಲಿ 1 ಲಕ್ಷದ 18 ಸಾವಿರ ಕೋಟಿ ಹಣ ಗ್ಯಾರಂಟಿಗೆ ಖರ್ಚು ಮಾಡಿದ್ದೇವೆ.. ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿಲ್ಲ. ನಾವು ಮಾಡಿದರೆ ಜನರಿಗೆ ತಪ್ಪು ಸಂದೇಶ ನೀಡ್ತಾ ಇದ್ದಾರೆ ಸಿಎಂ ಖೇದ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆಯಾಗಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
(Super speciality Hospital) ಮಂಜೂರಾದರೆ ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಹೆಚ್ಚಿನ ಆರೋಗ್ಯ ಸೌಲಭ್ಯ ಲಭ್ಯವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ
ಇದನ್ನು ಓದಿ : ಕಡಲತೀರದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರ ಬಂಧನ.
ಭಟ್ಕಳದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ
ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ. ಐದು ಲಕ್ಷ ರೂ. ಹಣ ಪಡೆಯುವಾಗ ಅಧಿಕಾರಿಗಳ ದಾಳಿ.
