ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಉಡುಪಿ(Udupi) : ಪೊಲೀಸ್ ಇಲಾಖೆ(Police Department) ವತಿಯಿಂದ ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ(Marathon) ಪಾಲ್ಗೊಂಡಿದ್ದ ಸಬ್ ಇನ್ಸಪೆಕ್ಟರ್(Sub Inspector) ಓರ್ವರು ಕುಸಿದು ಬಿದ್ದ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಕುಂದಾಪುರ ಗ್ರಾಮಾಂತರ(Kundapura Rural) ಎಸ್‌ಐ ನಾಸೀರ್ ಹುಸೇನ್ (58) ಮೃತಪಟ್ಟ ಪೊಲೀಸ್ ಅಧಿಕಾರಿಯಾಗಿದ್ದಾರೆ. ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ(Udupi Ajjarakadu Ground) ಇಂದು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಭಾಗವಹಿಸಿದ್ದರು.
ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಅವರು ಒಮ್ಮೆಲೆ ಕುಸಿದು ಬಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.
ಎಸ್ ಐ ನಾಸಿರ್ ಹುಸೇನ್ ಅವರು ಉಡುಪಿ ಜಿಲ್ಲೆಯ ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಅಮಾಸೆಬೈಲು, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದರು. ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.
ಇದನ್ನು ಓದಿ : ಅಪ್ರಾಪ್ತರಿಗೆ ಅಮಲು ಪದಾರ್ಥ ಪೂರೈಸಿದ ಕಾರಗದ್ದೆ ನಿವಾಸಿ ಬಂಧನ.
ಜೋಯಿಡಾ ತಾಲೂಕಿನಾದ್ಯಂತ ಹೋಳಿ ಹಬ್ಬದ ನಿಮಿತ್ತ ಸುಗ್ಗಿ(ಸಿಗ್ಮೋ) ಕುಣಿತದ ಸಂಭ್ರಮ.
