ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ವಿವಿಧಬೇಡಿಕೆಗಳಈಡೇರಿಕೆಗೆಆಗ್ರಹಿಸಿ ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ವೈದ್ಯರು(Government Hospitals Doctors) ಅನಿರ್ದಿಷ್ಠಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಹೀಗಾಗಿ ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ (Karnataka Government Hospitals) ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD) ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ವಿವಿಧ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಇದು ದೊಡ್ಡ ತೊಂದರೆಯಾಗುವ ಆತಂಕ ಎದುರಾಗಲಿದೆ.
ರಾಜ್ಯದಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಭಿಸಿಕೊಂಡಿದ್ದಾರೆ. ಹೀಗಾಗಿ ಪರಿಸ್ಥಿತಿ ಗಂಭೀರವಾಗುವ ಲಕ್ಷಣವಿದೆ.
ಕಳೆದ ಹಲವು ವರ್ಷಗಳಿಂದ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ನಡೆಯದಿರುವ ವೃಂದ ಮತ್ತು ನೇಮಕಾತಿ ಪ್ರಕ್ರಿಯೆ, 13 ವರ್ಷಗಳಿಂದ ಪರಿಷ್ಕರಣೆಗೊಳ್ಳದ ವೈದ್ಯರ ಜೇಷ್ಠತಾ ಪಟ್ಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ(Medicine Shortage) ಸೇರಿದಂತೆ ಒಟ್ಟು 15 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘವು ಮುಷ್ಕರಕ್ಕೆ ಕರೆ ನೀಡಿದೆ.
ಆರೋಗ್ಯ ಇಲಾಖೆ(Health Department) ಇದುವರೆಗೆ ಏಳು ಸಭೆಗಳನ್ನ ನಡೆಸಿ ವೈದ್ಯರ ಬೇಡಿಕೆಗಳ ಬಗ್ಗೆ ಚರ್ಚಿಸಿದೆ. ಮಾರ್ಚ್ 2ರಂದು ಆರೋಗ್ಯ ಸಚಿವರ(Health Minister) ಸಮ್ಮುಖದಲ್ಲಿ ನಡೆದ ಸಭೆಯೂ ಪ್ರಯೋಜನವಾಗಿಲ್ಲ. ಸರ್ಕಾರದಿಂದ ಯಾವುದೇ ಲಿಖಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ನಡೆಸಲು ತೀರ್ಮಾನಿಸಿದ್ದಾರೆ.
ಬುಧವಾರ ಮಾರ್ಚ್ 11ರಿಂದ ವೈದ್ಯರು ಮತ್ತು ಸಿಬ್ಬಂದಿಗಳು ಕಪ್ಪು ಪಟ್ಟಿಯನ್ನು ಧರಿಸಿ ಓಪಿಡಿ ಸೇವೆಗಳನ್ನು(OPD Service) ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. ಬಳಿಕ ಮಾರ್ಚ್ 16ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರಾಗುವ ಎಚ್ಚರಿಕೆ ನೀಡಲಾಗಿದೆ.
ಇದನ್ನು ಓದಿ : ಕಾರವಾರ ರಾ. ಹೆದ್ದಾರಿಯಲ್ಲಿ ಭೀಕರ ಅಪಘಾತ. ಕಾರಿನ ಮೇಲೆ ಪಲ್ಡಿಯಾದ ಕಂಟೇನರ್ ವಾಹನ.
