ಇ ಸಮಾಚಾರ ಡಿಜಿಟಲ್ ನ್ಯೂಸ್(esamachara  digital news) ಭಟ್ಕಳ(Bhatkal) :  ನಕಲಿ ಆಧಾರ್ ಕಾರ್ಡ್(Duplicate Adhar Card) ಮತ್ತು ಪಹಣಿ ಪತ್ರಗಳನ್ನು(RTC) ನ್ಯಾಯಾಲಯಕ್ಕೆ ಸಲ್ಲಿಸಿ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ಜಾಲದ ಪ್ರಮುಖ ಆಸಾಮಿಯೋರ್ವನನ್ನು ಭಟ್ಕಳ ನಗರ ಪೊಲೀಸರು(Bhatkal Town Police) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2025 ರ ಜೂನ್ 30 ರಂದು ಭಟ್ಕಳದ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಪ್.ಸಿ  ನ್ಯಾಯಾಲಯದಲ್ಲಿ ಭಟ್ಕಳ(JMFC Court Bhatkal) ಗ್ರಾಮೀಣ ಠಾಣೆಯ ಕ್ರೈಂ ನಂಬರ್  56/2025 ರ ಆರೋಪಿಗಳಿಗೆ ಜಾಮೀನು ನೀಡಲು ಕೆಲವು ವ್ಯಕ್ತಿಗಳು ಬಂದಿದ್ದರು. ಅವರು ಸಲ್ಲಿಸಿದ್ದ ಆಧಾರ್ ಕಾರ್ಡ್(Adhara Card) ಮತ್ತು ಪಹಣಿ ಪತ್ರಗಳನ್ನು(RTC) ನ್ಯಾಯಾಲಯದ ಶೂರಿಟಿ ಮ್ಯಾನೇಜ್‌ಮೆಂಟ್ ಸಿಸ್ಟಮ್’ ಮೂಲಕ ಪರಿಶೀಲಿಸಿದಾಗ, ಅವು ನಕಲಿ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿತ್ತು. ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದನ್ನು ಅರಿತ ಆರೋಪಿಗಳು ನ್ಯಾಯಾಲಯದ ಆವರಣದಿಂದ ಪರಾರಿಯಾಗಿದ್ದರು. ಈ ಸಂಬಂಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ(Bhatkal Town Police Station) ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯಕ್ಕೆ ನಕಲಿ‌ ದಾಖಲೆ ಸಲ್ಲಿಸಿ ಗಂಭೀರ ವಂಚನೆ ಮಾಡಿರುವ ಪ್ರಕರಣದ ಬೆನ್ನುಹತ್ತಿದ ಪೊಲೀಸರು,  ಮಂಗಳೂರಿನ ಮರೋಳಿ ನಿವಾಸಿ ಮಹೇಶ ಬಿ. ಮೋಹನ ನಾಯಕ ಎಂಬಾತನನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ. ದಸ್ತಗಿರಿ ನಿಯಮಗಳನ್ನು ಪಾಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಭಟ್ಕಳ ನಗರ ಪೊಲೀಸ್ ನಿರೀಕ್ಷಕರಾದ ದಿವಾಕರ ಪಿಎಂ  ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಎಸ್ಐ ನವೀನ್ ಎಸ್. ನಾಯ್ಕ ಸಿಬ್ಬಂದಿಗಳಾದ ದಿನೇಶ ನಾಯಕ ಮತ್ತು ಮಹಾಂತೇಶ ಹಿರೇಮಠ ಪಾಲ್ಗೊಂಡಿದ್ದರು.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ ತಂಡದ ಸಮಯಪ್ರಜ್ಞೆ ಮತ್ತು ಕರ್ತವ್ಯನಿಷ್ಠೆಯನ್ನು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಶ್ಲಾಘಿಸಿದ್ದಾರೆ. ಈ ಜಾಲದಲ್ಲಿ ಇನ್ನು ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನು ಓದಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಗೆ ಬೆಂಕಿ. ಸ್ಥಳದಲ್ಲಿ ಆತಂಕ. ವಾಹನ ಸಂಚಾರ ಅಸ್ತವ್ಯಸ್ತ.

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ.  ನ್ಯಾಯಾಲಯ ತೀರ್ಪು.