ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news): ಮುಂಡಗೋಡು(Mundgod) : ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ(Mundgod Town) ಶುಕ್ರವಾರ ರಾತ್ರಿ ಭೀಕರ ಹತ್ಯೆ ಘಟನೆ ನಡೆದಿದೆ. ಪಟ್ಟಣದ ಬಸ್ ನಿಲ್ದಾಣದ ಎದುರಿನ ಅಂಬಿಕಾ ಹೊಟೇಲ್‌ನಲ್ಲಿ(Ambika Hotel) ಈ ದುರ್ಘಟನೆ ಸಂಭವಿಸಿದೆ.

ರೌಡಿಶೀಟರ್(Rowdisheeter) ಜಮೀರ್ ಅಹ್ಮದ್ ದರ್ಗಾವಾಲೆ ಎಂಬಾತನನ್ನ ಹತ್ಯೆ ಮಾಡಲಾಗಿದೆ. ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಸ್ನೇಹಿತನೊಂದಿಗೆ ಊಟಕ್ಕೆ ಬಂದಿದ್ದ ವೇಳೆ ನಾಲ್ಕೈದು ಮಂದಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ತನ್ನ ಸ್ನೇಹಿತನನ್ನು ಸಿಗರೇಟ್ ತರಲು ಹೊರಗೆ ಕಳುಹಿಸಿದ್ದ ಸಮಯದಲ್ಲಿ ಹೊಟೇಲ್‌ಗೆ ಏಕಾಏಕಿ ನುಗ್ಗಿದ ಆರೋಪಿಗಳು ಜಮೀರ್ ಮೇಲೆ ಖಾರದ ಪುಡಿ ಎರಚಿ ಗಾಬರಿಗೊಳಿಸಿದ್ದಾರೆ. ತಪ್ಪಿಸಿಕೊಳ್ಳಲು ಜಮೀರ್ ಅಡುಗೆ ಕೋಣೆಯತ್ತ ಓಡಿದರೂ, ಹಂತಕರು ಅವರನ್ನು ಬೆನ್ನಟ್ಟಿ ಹಿಡಿದು ಹರಿತವಾದ ಮಚ್ಚಿನಿಂದ ಕುತ್ತಿಗೆಗೆ ಇರಿದು ಹತ್ಯೆಗೈದಿದ್ದಾರೆ.

ಘಟನೆಯಿಂದ ಬೆಚ್ಚಿಬಿದ್ದ ಹೊಟೇಲ್ ಮಾಲೀಕ(Hotel Owner) ತಕ್ಷಣ ಸ್ಥಳದಿಂದ ಓಡಿ ಹೋಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದಾಳಿ ನಡೆಸಿದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.

ಸುಮಾರು ಒಂದೂವರೆ ವರ್ಷಗಳ ಹಿಂದೆ ಜಮೀರ್ ಅವರನ್ನು ಹಣಕ್ಕಾಗಿ ಅಪಹರಣ(Kidnapped) ಮಾಡಲಾಗಿದ್ದು, 30 ಲಕ್ಷ ರೂ. ಬೇಡಿಕೆ ಇಡಲಾಗಿತ್ತು. ಆ ಪ್ರಕರಣವನ್ನು ಮುಂಡಗೋಡ ಪೊಲೀಸರು(Mundgod Police) ಸಿನಿಮಾ ಶೈಲಿಯಲ್ಲಿ ಭೇದಿಸಿ ಆರೋಪಿಗಳನ್ನು ಬಂಧಿಸಿದ್ದರು.

ಪ್ರಸ್ತುತ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಸ್ಥಳಕ್ಕೆ ಎಸ್ಪಿ ದೀಪನ್(SP Deepan) ಭೇಟಿ ನೀಡಿದ್ದು ಆರೋಪಿಗಳ ಪತ್ತೆಗಾಗಿ ಮೂರು ತಂಡಗಳನ್ನ ರಚಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನು ಓದಿ : ಅಂಧ ವಿದ್ಯಾರ್ಥಿನಿಗೆ ನ್ಯಾಯ ನೀಡಿದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ.