ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಬೈಂದೂರು(Bainduru) : ಬಾಡಿಗೆ ಮನೆಯೊಂದರಲ್ಲಿ ನಡೆದಿದ್ದ ಭಾರಿ ಕಳ್ಳತನ(Theft) ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಕಳುವಾಗಿದ್ದ 6 ಲಕ್ಷ ರೂ. ನಗದನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದ್ದಾರೆ.
ಮನೆಯ ಬೀಗ ಮುರಿದು ಕಳ್ಳತನ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಜಸ್ತಾನ ಮೂಲದ(Rajasthan Native) ಮಹೇಂದ್ರ ಸೈನ್ ಎಂದು ಗುರುತಿಸಲಾಗಿದೆ.
ಏಪ್ರಿಲ್ 23ರಂದು ಮಧ್ಯಾಹ್ನದಿಂದ ರಾತ್ರಿ ನಡುವಿನ ಅವಧಿಯಲ್ಲಿ ಎಸ್‌ಬಿಐ ಬ್ಯಾಂಕ್(SBI Bank) ಹಿಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿತ್ತು. ಮನೆಯೊಳಗಿನ ಗೋಡ್ರೆಜ್ ಅಲ್ಮೆರಾದಲ್ಲಿ ಇಡಲಾಗಿದ್ದ 6 ಲಕ್ಷ ರೂ. ನಗದು ಕಳವಾಗಿತ್ತು.
ಘಟನೆ ಸಂಬಂಧ ಬೈಂದೂರು ವೃತ್ತನಿರೀಕ್ಷಕ(Bainduru Circle Inspector) ಶಿವಕುಮಾರ್ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಿ ಆರೋಪಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ತನಿಖೆಯ ವೇಳೆ ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು, ಬಂಧಿಸಿ ವಿಚಾರಣೆ ನಡೆಸಿದರು. ಬಳಿಕ ಆರೋಪಿಯಿಂದ ಸಂಪೂರ್ಣ 6 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ(Bainduru Police Station) ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಇದನ್ನು ಓದಿ : ಹಳಿಯಾಳದಲ್ಲಿ ಭೀಕರ ರಸ್ತೆ ಅಪಘಾತ. ಟ್ರಕ್‌ಗೆ ಕಾರು ಡಿಕ್ಕಿ.
