ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಬೆಳಗಾವಿ(Belagavi) : ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವ ವಿವಾಹಿತೆಯೋರ್ವಳು ಪತಿಯ ಮನೆಯಲ್ಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ(Gold Ornaments) ಕದ್ದು ಪರಾರಿಯಾದ ಘಟನೆ ನಡೆದಿದೆ. ನವವಿವಾಹಿತೆ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ(Belagavi District) ರಾಮದುರ್ಗ ತಾಲೂಕಿನ(Ramadurga) ಹೊಸಕೋಟಿ ಗ್ರಾಮದಲ್ಲಿ(Hosakote Village) ಈ ಸಂಗತಿ ಬೆಳಕಿಗೆ ಬಂದಿದೆ.
ಹಣಮಂತ ಮಾರಾಪೂರ ಹಾಗೂ ಹಸೀನಾ ನದಾಫ್ ಬಂಧಿತರು. ಆರೋಪಿಗಳಿಂದ ಸುಮಾರು ₹11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣಗಳನ್ನು(Silver Ornaments) ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಿಲ್ಯಾನ್ ನದಾಫ್ ಎಂಬುವವರು ಕಟಕೋಳ ಪೊಲೀಸ್ ಠಾಣೆಯಲ್ಲಿ(Katakol Police Station) ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕೇವಲ 48 ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಸೀನಾ ಮೂಲತಃ ಮೂಡಲಗಿ ತಾಲೂಕಿನವಳಾಗಿದ್ದು, ಎರಡು ತಿಂಗಳ ಹಿಂದಷ್ಟೇ ಹೊಸಕೋಟಿ ಗ್ರಾಮದ ಶರೀಫ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಆದರೆ ಮದುವೆಯಾದ ಬಳಿಕವೂ ಆಕೆ ತನ್ನ ಪ್ರಿಯಕರ ಹಣಮಂತ ಮಾರಾಪೂರನೊಂದಿಗೆ ಸಂಪರ್ಕ ಮುಂದುವರಿಸಿಕೊಂಡಿದ್ದಳು. ಪ್ರಿಯಕರನ ಜೊತೆ ಹೊಸ ಜೀವನ(New Life) ಆರಂಭಿಸುವ ಉದ್ದೇಶದಿಂದ ಹಸೀನಾ, ಪತಿಯ ಮನೆಯಲ್ಲಿದ್ದ ಸುಮಾರು ₹21 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದಳು ಎಂದು ಪೊಲೀಸ್ ತನಿಖೆಯಲ್ಲಿ(Police Investigation) ಗೊತ್ತಾಗಿದೆ.
ಈ ಬಗ್ಗೆ ಕಟಕೋಳ ಠಾಣೆ ಪೊಲೀಸರು(Katakola Station Pokice) ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ(Judicial Custody) ನೀಡಲಾಗಿದೆ.
ಇದನ್ನು ಓದಿ : ಮುರ್ಡೇಶ್ವರದಲ್ಲಿ ಕಾರು ಅಪಘಾತ. ಮಾಜಿ ಸೈನಿಕ ಸಾವು.
