ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) : ಉತ್ತರಕನ್ನಡ(Uttarakannada) ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ(Mundgod Town) ಮತ್ತೆ ತಲೆದೋರಿರುವ ಮೀಟರ್ ಬಡ್ಡಿ ದಂಧೆ ವಿರುದ್ಧ ಜಿಲ್ಲಾ ಪೊಲೀಸರು(District Police) ಕಠಿಣ ಕ್ರಮ ಕೈಗೊಂಡಿದ್ದಾರೆ.
ಮೀಟರ್ ಬಡ್ಡಿ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆನ್ನುವವರ ಹಾಗೂ ರೌಡಿ ಶೀಟರ್‌ಗಳ(Rowdy Sheeter) ಮನೆಗಳ ಮೇಲೆ ಪೊಲೀಸರು ಏಕಕಾಲದಲ್ಲಿ ದಾಳಿ(Raid) ನಡೆಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮುಂಡಗೋಡದಲ್ಲಿ(Mundgod) ಮತ್ತೆ ಮೀಟರ್ ಬಡ್ಡಿ ದಂಧೆ ಚುರುಕುಗೊಂಡಿರುವ ಬಗ್ಗೆ ಸಾರ್ವಜನಿಕರಿಂದ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ(District Police Department) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಅದರಂತೆ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ತಂಡಗಳನ್ನು ರಚಿಸಿ ದಾಳಿ ಕಾರ್ಯಾಚರಣೆ(Raid Operations) ನಡೆಸಲಾಗಿದೆ.
ಈ ಹಿಂದೆ ನಡೆದ ದಾಳಿಗಳ ವೇಳೆ ಕೆಲ ಆರೋಪಿಗಳ ಮನೆಗಳಲ್ಲಿ ಖಾಲಿ ಚೆಕ್‌ಗಳು(Blank Check), ಸಾಲದ ದಾಖಲಾತಿಗಳು(Loans Papers) ಸೇರಿದಂತೆ ಹಲವು ದಾಖಲೆಗಳು ಪತ್ತೆಯಾಗಿದ್ದವು. ಆ ಬಳಿಕ ಕೆಲವು ಸಮಯ ದಂಧೆ ಕಡಿಮೆಯಾಗಿದ್ದರೂ, ಇದೀಗ ಮತ್ತೆ ದಂಧೆ ಚಿಗುರಿಕೊಂಡಿರುವ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.
ಕೆಲ ದಿನಗಳ ಹಿಂದೆ ಮೀಟರ್ ಬಡ್ಡಿ ದಂಧೆಯ ಪ್ರಮುಖ ವ್ಯಕ್ತಿಯಾಗಿದ್ದ ಜಮೀರ್ ಹತ್ಯೆ ಪ್ರಕರಣದ ಬಳಿಕವೂ ಅಕ್ರಮ ಹಣಕಾಸು(Illegal Money) ವ್ಯವಹಾರಗಳು ಮುಂದುವರಿದಿರುವುದು ಪೊಲೀಸ್ ಇಲಾಖೆಯ(Police Department) ಗಮನಕ್ಕೆ ಬಂದಿದ್ದು, ಈ ಹಿನ್ನೆಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ದಾಳಿ ವೇಳೆ ಪೊಲೀಸರು ಆರೋಪಿಗಳ ಮನೆಗಳಿಗೆ ತೆರಳಿ ಮನೆಯ ಹಿರಿಯರ ಸಮ್ಮುಖದಲ್ಲೇ ಎಚ್ಚರಿಕೆ ನೀಡಿ, ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ದಂಧೆಗಳಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ(Police Warning) ನೀಡಿದ್ದಾರೆ.
ಮುಂಡಗೋಡ ಪಟ್ಟಣದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನು ಓದಿ : ನವ ವಿವಾಹಿತೆಯ ನೌಟಂಕಿ ಆಟ. ಪತಿಯ ಮನೆ ಚಿನ್ನ ಕದ್ದು ಪ್ರಿಯಕರನೊಂದಿಗೆ ಲಾಕ್.
