ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಯಲ್ಲಾಪುರ(Yallapur) : ಮದುವೆಗೆ ತೆರಳಿದ್ದ ಮಿನಿ ಬಸ್(Mini Bus) ಅಪಘಾತಕ್ಕೀಡಾದ ಘಟನೆ ಉತ್ತರಕನ್ನಡ(Uttarakannada) ಜಿಲ್ಲೆಯ ಯಲ್ಲಾಪುರ(Yallapur) ತಾಲೂಕಿನ ಅರಬೈಲ್ ಘಟ್ಟದಲ್ಲಿ(Arebail Ghat) ಸಂಭವಿಸಿದೆ.
ಅರಬೈಲ್ ಗ್ರಾಮದ(Arebail Village) ಕುಟುಂಬವೊಂದು ಬೆಳಗಾವಿಯಲ್ಲಿ(Belagavi) ನಡೆದ ಮದುವೆ ಕಾರ್ಯಕ್ರಮಕ್ಕೆ(Marriage Programme) ತೆರಳಿದ್ದು, ವಾಪಸ್ ಮನೆಗೆ ಮರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 52ರ(National Highway 52) ಅರಬೈಲ್ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ರಸ್ತೆ ಬದಿಯ ಗುಡ್ಡಕ್ಕೆ ನೇರವಾಗಿ ಗುದ್ದಿದೆ.
ಇನ್ನು ಕೇವಲ ಎರಡು ಕಿಲೋಮೀಟರ್ ಸಾಗಿದರೆ ಮನೆ ತಲುಪುವಷ್ಟರಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ವಾಹನದಲ್ಲಿದ್ದ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ವ್ಯವಸ್ಥೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು(Yallapur Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಇದನ್ನು ಓದಿ : ಮುಂಡಗೋಡದಲ್ಲಿ ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ
