ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news): ಹಳಿಯಾಳ(Haliyal): ತಾಲೂಕಿನ ಮಂಗಳವಾಡ ಗ್ರಾಮ ಪಂಚಾಯತ್(Mangalawada Grama panchayat) ವ್ಯಾಪ್ತಿಯಲ್ಲಿ ಸುರಿದ ಭಾರೀ ಗಾಳಿ ಮಳೆ(Heavy Wind Rain) ಮತ್ತು ಸಿಡಿಲಿನ ಅಬ್ಬರಕ್ಕೆ ದೊಡ್ಡ ಪ್ರಮಾಣದ ಹಾನಿ ಸಂಭವಿಸಿದೆ.
ಭಾನುವಾರ ಸಂಜೆ ಸುಮಾರು ನಾಲ್ಕು ಗಂಟೆ ವೇಳೆಗೆ ಸಂಭವಿಸಿದ ಅವಘಡದಲ್ಲಿ ಸಿಡಿಲು(Thunderstorm) ಬಡಿದು ರೋಮನ್ ಬಾವಟಿಸ್ ದಾಲ್ಮೆತ್ ಅವರಿಗೆ ಸೇರಿದ ಎರಡು ಎತ್ತುಗಳು(Bulls) ಹಾಗೂ ಒಂದು ಆಕಳು(Cow) ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಘಟನೆಯಿಂದ ಪಶುಸಂಗೋಪನೆಗೆ ಅವಲಂಬಿತವಾಗಿದ್ದ ಕುಟುಂಬಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಇದೇ ವೇಳೆ ಭಾರೀ ಗಾಳಿ ಮಳೆಯಿಂದ ಮಂಗಳವಾಡ ಪ್ರೌಢಶಾಲೆಯ ಮೇಲ್ಚಾವಣಿಯೂ ಹಾರಿ ಹೋಗಿದ್ದು, ಶಾಲಾ ಕಟ್ಟಡಕ್ಕೆ ಹಾನಿಯಾಗಿದೆ. ಘಟನೆ ಕುರಿತು ಶಿಕ್ಷಣ ಇಲಾಖೆಯ(Education Department) ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಬಿಇಒ ಅವರ ಗಮನಕ್ಕೂ ತರಲಾಗಿದೆ ಎಂದು ಗ್ರಾಮ ಪಂಚಾಯತ್ ಮೂಲಗಳು ತಿಳಿಸಿವೆ.
ಸಿಡಿಲು ಹಾಗೂ ಗಾಳಿ ಮಳೆಯ ಅಬ್ಬರದಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹಾನಿಗೊಳಗಾದ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನು ಓದಿ : ಬಾರೀ ಗಾಳಿ ಮತ್ತು ಸಮುದ್ರದಲ್ಲಿ ಅಲೆಗಳು ಸಾಧ್ಯತೆ. ಮೀನುಗಾರರಿಗೆ ಎಚ್ಚರಿಕೆ.
