ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಕಾರವಾರ(Karwar) : ರಾಷ್ಟ್ರೀಯ ಹೆದ್ದಾರಿ 66ರ(NH 66) ಮಾಜಾಳಿ(Majali) ಬಳಿ ಕಾರು ಹಾಗೂ ಆಟೋ ರಿಕ್ಷಾ(Auto Rickshaw) ನಡುವೆ ಭೀಕರ ಅಪಘಾತ ಸಂಭವಿಸಿ ಆಟೋ ಚಾಲಕ(Auto Driver) ಮೃತಪಟ್ಟ ಘಟನೆ ನಡೆದಿದೆ.
ಉತ್ತರಕನ್ನಡ(Uttarakannada) ಜಿಲ್ಲೆಯ ಕಾರವಾರ(Karwar) ತಾಲೂಕಿನ ಮಾಜಾಳಿ(Majali) ಸಮೀಪ ಈ ದುರ್ಘಟನೆ ನಡೆದಿದ್ದು, ಡಿಕ್ಕಿಯ ತೀವ್ರತೆಗೆ ಆಟೋ ರಿಕ್ಷಾ ಹೆದ್ದಾರಿಯಲ್ಲೇ ಉರುಳಿ ಬಿದ್ದರೆ, ಕಾರು ರಸ್ತೆ ಕೆಳಭಾಗಕ್ಕೆ ಉರುಳಿ ಬಿದ್ದಿದೆ.
ಅಪಘಾತದ ಪರಿಣಾಮ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ(National Highway) ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸಂಚಾರವನ್ನು ಸುಗಮಗೊಳಿಸಿದರು.
ಘಟನೆಯಲ್ಲಿ ಆಟೋ ಚಾಲಕರಾದ ಪ್ರದೀಪ್ ಪೆಡ್ನೆಕರ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅಪಘಾತಕ್ಕೀಡಾದ ಕಾರು ತಮಿಳುನಾಡು ನೋಂದಣಿಯ ಮಾರುತಿ ಬ್ರೀಜಾ ಕಾರು ಎಂದು ತಿಳಿದುಬಂದಿದೆ.
ಈ ಕುರಿತು ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ(Chittakul Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : ಹೈಕಮಾಂಡ್ ಸೂಚನೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ. ಡಿಕೆಶಿಗೆ ಪಟ್ಟ.
