ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಅಂಕೋಲಾ(Ankola) : ಉತ್ತರ ಕನ್ನಡ(Uttarakannada) ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನ ಬಾಗಿಲು(Ankola near Kanchinabagilu) ಸಮೀಪ ಖಾಸಗಿ ಪ್ರಯಾಣಿಕರ ಬಸ್ ಪಲ್ಟಿಯಾದ ಪರಿಣಾಮ ಓರ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಆಂದ್ರಪ್ರದೇಶ ಮೂಲದ ಶರಣಯ್ಯ (42) ಮೃತ ದುರ್ದೈವಿ. ಹೈದರಾಬಾದ್‌ನಿಂದ ಗೋವಾ ಕಡೆಗೆ(Hyderabad To Goa) ತೆರಳುತ್ತಿದ್ದ ಸೀಬರ್ಡ್(Seabird) ಸಂಸ್ಥೆಯ ಖಾಸಗಿ ಬಸ್‌ನಲ್ಲಿ ಸುಮಾರು 36 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಕಂಚಿನ ಬಾಗಿಲು ಪ್ರದೇಶದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಓರ್ವ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಒಂಬತ್ತು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಅಂಕೋಲಾ ಪೊಲೀಸ್ ಠಾಣೆಯ(Ankola Police Station) ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ(Fire Brigade) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್‌ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು.

ಬಳಿಕ ಕ್ರೇನ್ ಸಹಾಯದಿಂದ ಪಲ್ಟಿಯಾಗಿದ್ದ ಬಸ್ ಅನ್ನು ಮೇಲಕ್ಕೆತ್ತುವ ಕಾರ್ಯ ನಡೆಸಲಾಯಿತು. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ಓದಿ : ಕ್ಷೇತ್ರದ ಬಗ್ಗೆ ಅಭಿಮಾನ ತೋರ್ಪಡಿಸಿದ ಸಚಿವ ಮಂಕಾಳ ವೈದ್ಯ. ಸರ್ಕಾರದ, ಮೀನುಗಾರಿಕೆ ಇಲಾಖೆ ಮತ್ತು ವಯಕ್ತಿಕ  ಪರಿಹಾರ ವಿತರಣೆ.