ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಮುರಿನಕಟ್ಟೆ(Murinakatte) ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದ ಹಿನ್ನಲೆಯಲ್ಲಿ ಜೂ.5 ರಂದು ಮದ್ಯ ಮಾರಾಟ ಸಾಗಾಟ(Liquor Sale, supply) ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ(DC Ordered).
ಶುಕ್ರವಾರದಂದು ಪ್ರತಿಭಟನಾ ಮೆರವಣಿಗೆ ನಡೆಸಿ ಭಟ್ಕಳ ಉಪವಿಭಾಗಾಧಿಕಾರಿಗಳಿಗೆ(Bhatkal AC) ಮನವಿ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ(Law and Order) ಕಾಪಾಡುವ ಹಿತದೃಷ್ಟಿಯಿಂದ ಜೂ.5 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೂ ಭಟ್ಕಳ ತಾಲೂಕಿನಾದ್ಯಂತ ಎಲ್ಲಾ ರೀತಿಯ ಮದ್ಯದ ಅಂಗಡಿ(Liquor Shop) ಮತ್ತು ಬಾರ್ಗಳನ್ನು ಬಂದ್(Bar Bundh) ಮಾಡಿ, ಮದ್ಯ ಸಾಗಾಟ ಹಾಗೂ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ (DC K Lakshmipriya) ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ : ಉಚಿತ ಬಸ್ ಪಾಸ್ ಸೇರಿ ಆರು ನಿರ್ಧಾರ ಘೋಷಿಸಿದ ಸಿಎಂ ಡಿ ಕೆ ಶಿವಕುಮಾರ್.
