ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಸಾಗರ(Sagar) : ಆರು ವರ್ಷದ ಪುಟ್ಟ ಬಾಲಕನೊಬ್ಬ ದಿಢೀರ್ ಹೃದಯಾಘಾತದಿಂದ(Heart Attack) ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ  ತಾಲೂಕಿನ ಹಾಳಸಸಿ ಗ್ರಾಮದಲ್ಲಿ(Halasasi Village) ಸಂಭವಿಸಿದೆ.​

ಕೊಡನವಳ್ಳಿ ಗ್ರಾಮದ(Kodanavalli Village) ನಿವಾಸಿಗಳಾದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರ,  ತ್ರಿಲೋಕ್ ಜೈನ್(6) ಮೃತಪಟ್ಟ ದುರ್ದೈವಿ. ಈತ ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ(Government Higher Primary School) ಒಂದನೇ ತರಗತಿಯಲ್ಲಿ ಓದುತ್ತಿದ್ದ.​ ಶನಿವಾರ ಮಧ್ಯಾಹ್ನ ಶಾಲಾ ಅವಧಿ ಮುಗಿಯುವ ಹೊತ್ತಿಗೆ ಎಂದಿನಂತೆ ಬಾಲಕ ತ್ರಿಲೋಕ್ ಜೈನ್ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದನು.

ಈ ಸಂದರ್ಭದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ಆಟದ ಮೈದಾನದಲ್ಲಿ(Ply Ground) ಏಕಾಏಕಿ ಕುಸಿದು ಬಿದ್ದಿದ್ದಾನೆ.​ ಬಾಲಕ ಪ್ರಜ್ಞೆ ತಪ್ಪಿ ಬಿದ್ದ ತಕ್ಷಣವೇ ಗಾಬರಿಗೊಂಡ ಶಾಲಾ ಸಿಬ್ಬಂದಿಗಳು ಹಾಗೂ ಸ್ಥಳೀಯರು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯದಲ್ಲೇ ಬಾಲಕ ಕೊನೆಯುಸಿರೆಳೆದಿದ್ದಾನೆ.  ಬಾಲಕನ ಅಕಾಲಿಕ ಸಾವಿಗೆ  ಹೃದಯಾಘಾತವೇ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ಗೊತ್ತಾಗಿದೆ.
ಇದನ್ನು ಓದಿ : ಹೊನ್ನಾವರದಲ್ಲಿ ಬಂಗಾರದ ಆಭರಣ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು.