ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಪದೇಪದೇ ಮಾದಕ ವಸ್ತುಗಳ(Drugs) ಅಕ್ರಮ ಸಾಗಾಟ, ಮಾರಾಟ ಹಾಗೂ ಸೇವನೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಕಾರವಾರದ ಡ್ರಗ್ ಪೆಡ್ಲರ್(Karwar Drug Peddler) ಓರ್ವನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ(Ballari Central Jail) ರವಾನಿಸಲಾಗಿದೆ.
ಕಾರವಾರ ಶಹರ ಪೊಲೀಸ್ ಠಾಣಾ(Karwar Town Police Station) ವ್ಯಾಪ್ತಿಯ ಹಬ್ಬುವಾಡದ ನಿವಾಸಿ(Habbuwada Residence) ಇಬ್ರಾಹಿಂ ದವಳಸಾಬ ಚೋಪದಾರ (22) ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕಾರವಾರ ಶಹರ, ಅಂಕೋಲಾ ಹಾಗೂ ಚಿತ್ತಾಕುಲ ಪೊಲೀಸ್ ಠಾಣೆಗಳಲ್ಲಿ(Ankola and Chittakul Police Station) ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಪ್ರತಿಬಂಧಕ ಕ್ರಮದಡಿ ಬಿಎನ್‌ಎಸ್‌ಎಸ್ ಕಾಯ್ದೆಯಡಿ ಸಹ ಪ್ರಕರಣ ದಾಖಲಾಗಿತ್ತು.
ಆರೋಪಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಕೂಡ ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿ ಮತ್ತೆ ಮತ್ತೆ ಮಾದಕ ವಸ್ತುಗಳ(Drugs) ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಇಬ್ರಾಹಿಂ ಚೋಪದಾರನನ್ನು ಬಂಧನದಲ್ಲಿಡುವಂತೆ ಆದೇಶ ಹೊರಡಿಸಲಾಗಿತ್ತು. ಹೀಗಾಗಿ ಆದೇಶದ ಅನುಸಾರ ಆರೋಪಿಗೆ ಬಂಧನ ವಾರಂಟ್(Arrest Warrant) ಜಾರಿಗೊಳಿಸಿ, ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳಿಸಲಾಗಿದೆ.
ಪೊಲೀಸ್ ಇಲಾಖೆ(Police Department) ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳಿಗೆ(Illegal Activities) ಕಡಿವಾಣ ಹಾಕುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ತಮ್ಮ ಸುತ್ತಮುತ್ತ ಡ್ರಗ್ಸ್ ಮಾರಾಟ ಅಥವಾ ಸಾಗಣೆ ಕುರಿತು ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ(Police Station) ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನು ಓದಿ : ಪೊಲೀಸರ ಎದುರು ರೌಡಿಯ ಆರ್ಭಟ. ನಡುಗಿದ ನಾಗರಿಕರು.
