ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal) : ಕಳೆದ ಕೆಲ ದಿನದಿಂದ ಭಟ್ಕಳದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ(ADGP) ಆರ್. ಹಿತೇಂದ್ರ ಹಾಗೂ ಪಶ್ಚಿಮ ವಲಯ ಐಜಿಪಿ(IGP) ಅಮಿತ್ ಸಿಂಗ್ ಅವರು ಭಟ್ಕಳಕ್ಕೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳ(Senior Police Officers) ಮಹತ್ವದ ಸಭೆ ನಡೆಸಿದರು.
ಕಾನೂನು ಸುವ್ಯವಸ್ಥೆ ಸ್ಥಿತಿಗತಿಗಳ ಪರಿಶೀಲನೆಗಾಗಿ ರಾಜ್ಯದ ಹಿರಿಯ ಅಧಿಕಾರಿಗಳ ಭೇಟಿ ಮಹತ್ವ ಪಡೆದುಕೊಂಡಿದೆ. ಭಾನುವಾರ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳ(Town & Rural Police Station) ಕಾರ್ಯವೈಖರಿಯನ್ನು ಪರಿಶೀಲಿಸಿದ ಬಳಿಕ ನಡೆದ ಸಭೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆಯಾಗುವ ಯಾವುದೇ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಇತ್ತೀಚೆಗೆ ನಡೆದ ವಿದ್ಯಾಮಾನಕ್ಕೆ ಸಂಬಂಧಿಸಿದ ವಿವಿಧ ಪ್ರಕರಣಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡ ಹಿರಿಯ ಅಧಿಕಾರಿಗಳು, ಇನ್ನಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು(Precautions Measure) ಕೈಗೊಂಡು ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಯಾವುದೇ ಸಂಘಟನೆ, ವ್ಯಕ್ತಿ ಅಥವಾ ಗುಂಪು ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡಬಾರದು. ಸಮಾಜದಲ್ಲಿ ಉದ್ವಿಗ್ನತೆ ಉಂಟುಮಾಡುವ ಪ್ರಯತ್ನಗಳು ಕಂಡುಬಂದಲ್ಲಿ ತಕ್ಷಣ ಕಾನೂನು ಕ್ರಮ(Legal Action) ಜರುಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಪಕ್ಷಪಾತವಿಲ್ಲದೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಲಾಯಿತು.
ಸಾಮಾಜಿಕ ಜಾಲತಾಣಗಳಲ್ಲಿ(Social Media) ಹರಡುವ ಸುಳ್ಳು ಮಾಹಿತಿ(Fake Newd), ವದಂತಿಗಳು(Roomer’s) ಹಾಗೂ ಪ್ರಚೋದನಾತ್ಮಕ ಸಂದೇಶಗಳ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಿದ್ದು, ಶಾಂತಿ ಕದಡುವ ಪ್ರಯತ್ನಗಳ ಬಗ್ಗೆ ಗುಪ್ತಚರ ಮಾಹಿತಿ(Intelligence Information) ಸಂಗ್ರಹಣೆಯನ್ನು ಹೆಚ್ಚಿಸಲು ತಿಳಿಸಲಾಯಿತು. ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಬೀಟ್ ವ್ಯವಸ್ಥೆಯನ್ನು ಬಲಪಡಿಸಿ, ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ಪೊಲೀಸ್ ನಿಗಾ ಮುಂದುವರಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್ ಎಂ.ಎನ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಭಟ್ಕಳ ಡಿವೈಎಸ್ಪಿ ಗಿರೀಶ್ ಬಿ. ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಇದನ್ನು ಓದಿ : ಇಸ್ಮಾಯಿಲ್ ಹವ್ವಾ ಹವಾ ಥಂಡ್ ಮಾಡಿದ ಭಟ್ಕಳ ಪೊಲೀಸರು.
