ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಭಟ್ಕಳ(Bhatkal) : ಎಸ್‌ಐಆರ್ (Special Intensive Revision) ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮುಂಡಳ್ಳಿ ಗ್ರಾಮ ಪಂಚಾಯಿತಿ(Mundalli Grama Panchayat) ವ್ಯಾಪ್ತಿಯಲ್ಲಿ ವಿಶೇಷ ಜಾಗೃತಿ ಜಾಥಾ(Special Awareness Rally) ಹಾಗೂ ಮಾನವ ಸರಪಳಿ(Human Chain) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ, ಅರ್ಹರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಹಾಗೂ ಅಗತ್ಯ ತಿದ್ದುಪಡಿಗಳನ್ನು ಸಮಯಕ್ಕೆ ಸರಿಯಾಗಿ ಮಾಡಿಸಿಕೊಳ್ಳಬೇಕು ಎಂಬ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕೇಶ್ವರ ಕೆ. ಗೊಂಡ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ  ಉದಯ ಖಾರ್ವಿ, ಮುಂಡಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಸರ್ಕಾರಿ ಪ್ರೌಢಶಾಲೆ ಮುಂಡಳ್ಳಿಯ(Government Highschool Mundalli) ಮುಖ್ಯ ಶಿಕ್ಷಕ ಶ್ರೀಕಾಂತ್ ನಾಯ್ಕ, ಸಹ ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು(School Students)  ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.