ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news)  ಕುಂದಾಪುರ(Kundapura) : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ(Shri Mookambika Temple) ದರ್ಶನಕ್ಕೆ ಬಂದಿದ್ದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹80,000 ನಗದು ಕಳ್ಳತನ ಪ್ರಕರಣವನ್ನು ಕೊಲ್ಲೂರು ಪೊಲೀಸರು(Kolluru Police) ಕೇವಲ 24 ಗಂಟೆಯೊಳಗೆ ಭೇದಿಸಿದ್ದಾರೆ.

ದರ್ಶನಕ್ಕೆ ಬಂದಿದ್ದ ನಿಮಿಶಾ ಎಂಬವರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹80,000 ನಗದು ಕಳುವಾಗಿತ್ತು. ದೇವಸ್ಥಾನದ ಆವರಣದಲ್ಲಿ ಎಷ್ಟೇ ಹುಡುಕಿದರೂ ಹಣ ಪತ್ತೆಯಾಗಿರಲಿಲ್ಲ. ಬಳಿಕ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ(Kolluru Police Station) ಪ್ರಕರಣ ದಾಖಲಾಗಿತ್ತು.

ಸಿಸಿ ಕ್ಯಾಮೆರಾ ದೃಶ್ಯಗಳು ಹಾಗೂ ಘಟನಾ ಸ್ಥಳದಲ್ಲಿ ಸಾರ್ವಜನಿಕರು ತೆಗೆದ ಛಾಯಾಚಿತ್ರಗಳ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿ ಮೂಲದ(Bhadravati Native) ನೇತ್ರಾವತಿ, ಶಾರದ ಹಾಗೂ ದುರ್ಗಮ್ಮ ಎಂದು ಗುರುತಿಸಲಾಗಿದೆ. ಕಳ್ಳತನ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ದುರ್ಗಮ್ಮ ವಿರುದ್ಧ ಈಗಾಗಲೇ ಎರಡು ಪ್ರಕರಣಗಳು ಹಾಗೂ ಶಾರದ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಪ್ರಕರಣದ ಕುರಿತು ಕೊಲ್ಲೂರು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.