ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಯಲ್ಲಾಪುರ (Yallapura) : ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಾಟ್ ಬಳಿ ತೂಫಾನ್ ಕ್ರೂಸರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ತೂಫಾನ್ ಕ್ರೂಸರ್ ಮತ್ತು ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ತೂಫಾನ್ ವಾಹನದಲ್ಲಿ ಚಾಲಕ ಸೇರಿ ಒಟ್ಟು 9 ಮಂದಿ ಪ್ರಯಾಣಿಸುತ್ತಿದ್ದು, ಎಲ್ಲರೂ ಧಾರವಾಡ ಮೂಲದವರಾಗಿದ್ದು, ಸ್ವಿಗ್ಗಿಯಲ್ಲಿ ಪಾರ್ಟ್ಟೈಮ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಗೋಕರ್ಣ, ಧರ್ಮಸ್ಥಳ ಹಾಗೂ ಚಿಕ್ಕಮಗಳೂರು ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ವರ ಸ್ಥಿತಿ ಗಂಭೀರವಾಗಿದೆ.
ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ (26), ಅಭಿಷೇಕ್ (26), ಚಾಲಕ ಸಂಜೀವ ಅಂಗಡಿ (33) , ಮಂಜುನಾಥ್ ಅಶೋಕ್ ಚುಲಕಿ (32), ಸಚಿನ್ ಹೆಬ್ಬಳ್ಳಿ(26) ಮೃತ ದುರ್ದೈವಿಗಳಾಗಿದ್ದಾರೆ.
ಶಿವರಾಜ್ ದುರ್ಗಪ್ಪ ಮಡಿವಾಳ್ (22) ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28) ಗಾಯಾಳುಗಳು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
